ಕೆಯುಡಬ್ಲೂಜೆ 2025-28 ನೇ ಸಾಲಿನ ಜಿಲ್ಲಾ ಘಟಕದ ಚುನಾವಣೆ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಹನುಮಂತ ಹಳ್ಳಿಕೇರಿ
Hanumantha Hallikeri elected as District President of KUWJ 2025-28 District Unit Election
ಕೆಯುಡಬ್ಲೂಜೆ 2025-28 ನೇ ಸಾಲಿನ ಜಿಲ್ಲಾ ಘಟಕದ ಚುನಾವಣೆ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಹನುಮಂತ ಹಳ್ಳಿಕೇರಿ
ಕೊಪ್ಪಳ 24 : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕೊಪ್ಪಳ ಜಿಲ್ಲಾ ಘಟಕದ ಚುನಾವಣಾ ಪ್ರಕ್ರಿಯೆ ಪ್ರಾರಂಭವಾಗಿದ್ದು, ಹಾಲಿ ಜಿಲ್ಲಾಧ್ಯಕ್ಷರಾದ ಹನುಮಂತ ಹಳ್ಳಿಕೇರಿ, ಹಾಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ನಾಗರಾಜ್ ಅವರು ಮತ್ತೊಮ್ಮೆ ಸ್ಪರ್ಧೆ ಬಯಸಿ ನಾಮಪತ್ರ ಸಲ್ಲಿಸಿದರು.ಶುಕ್ರವಾರದಂದು ಇಲ್ಲಿನ ಚುನಾವಣಾ ಕಚೇರಿಯಾಗಿರೋ ಪತ್ರಿಕಾಭವನದಲ್ಲಿ ಅಪಾರ ಪತ್ರಕರ್ತರೊಡನೆ ತೆರಳಿ ಜಿಲ್ಲಾಧ್ಯಕ್ಷರ ಸ್ಥಾನಕ್ಕೆ ಹನುಮಂತ ಹಳ್ಳಿಕೇರಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನಾಗರಾಜ್. ವೈ ಅವರು ಚುನಾವಣಾ ಅಧಿಕಾರಿಗಳಾದ ದುರಗಪ್ಪ ತಿಪ್ಪನಾಳ ಅವರಿಗೆ ನಾಮಪತ್ರ ಸಲ್ಲಿಸಿದರು.ಈ ಸಂಧರ್ಬದಲ್ಲಿ ನಾಮಪತ್ರ ಸಲ್ಲಿಸಿದ ಹನುಮಂತ ಹಳ್ಳಿಕೇರಿ, ನಾಗರಾಜ್.ವೈ ನಾಮಪತ್ರ ಸಲ್ಲಿಸುವ ವೇಳೆ ರಾಷ್ಟ್ರೀಯ ಸಮಿತಿ ಸದಸ್ಯರಾದ ಜಿ.ಎಸ್ ಗೋನಾಳ, ರಾಜ್ಯ ಸಮಿತಿ ಸದಸ್ಯರಾದ ಎಂ.ಸಾದಿಕ್ ಅಲಿ, ಎಚ್.ಎಸ್ ಹರೀಶ್, ಉಪಾಧ್ಯಕ್ಷರಾದ ರುದ್ರಗೌಡ ಪಾಟೀಲ್, ಜಿಲ್ಲಾ ಕಾರ್ಯದರ್ಶಿ ವೀರಣ್ಣ ಕಳ್ಳಿಮನಿ, ನಿಕಟಪೂರ್ವ ಅಧ್ಯಕ್ಷ ಬಸವರಾಜ ಗುಡ್ಲಾನೂರು, ಜಿಲ್ಲಾ ಖಜಾಂಚಿ ರಾಜು.ಬಿ.ಆರ್, ಸದಸ್ಯರಾದ ಪ್ರಭು ಗಾಳಿ, ಬಸವರಾಜ ತೊಂಡಿಹಾಳ, ಶಿವಕುಮಾರ್ ಪತ್ತಾರ್, ಮಾರುತಿ ಕಟ್ಟಿಮನಿ, ಶಿವಕುಮಾರ್ ಹಿರೇಮಠ, ಬಸವರಾಜ ಪಲ್ಲೇದ್, ಜಿಲ್ಲಾ ಕಾರ್ಯಕಾರಣಿ ಸಮಿತಿ ಸದಸ್ಯ ಮಂಜುನಾಥ ಪ್ರಸಾದ್ ಸೇರಿದಂತೆ ಅನೇಕ ಪತ್ರಕರ್ತರ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 