ನಡ್ಡಾಗೆ ಜನ್ಮದಿನದ ಶುಭ ಕೋರಿದ ಪ್ರಧಾನಿ

ನವದೆಹಲಿ, ಡಿ 2- ಬಿಜೆಪಿ ಕಾರ್ಯಾಧ್ಯಕ್ಷ ಜೆ ಪಿ ನಡ್ಡಾ ಅವರು ಇಂದು 59 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. 1960 ರ ಇದೇ ದಿನದಂದು ಅವರು ಪಾಟ್ನಾದಲ್ಲಿ ಜನಿಸಿದರು.

  ನಡ್ಡಾ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹುಟ್ಟು ಹಬ್ಬದ ಶುಭ ಕೋರಿದ್ದಾರೆ. ನಡ್ಡಾ ಅವರು ಯಾವುದೇ ಹೊಣೆಗಾರಿಕೆಯನ್ನು ಅತ್ಯಂತ ಸಮರ್ಥವಾಗಿ ಮತ್ತು ಶಿಸ್ತಿನಿಂದ ನಿರ್ವಹಿಸುತ್ತಾರೆ ಎಂದು ಪ್ರಧಾನಿ ಟ್ವೀಟ್ ಮೂಲಕ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.ನಡ್ಡಾ ಅವರು ಕಳೆದ ಜೂನ್ ನಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ದ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.