ಹರ್ ಘರ್ ಯೋಧ: ರಾಣೆಬೆನ್ನೂರಿನ ಮಣ್ಣಿನಲ್ಲಿ ಮೊಳಗಿತು ಕ್ಷಾತ್ರತೇಜದ ಹೂಂಕಾರ್! ಶೌರ್ಯ ಪ್ರಶಿಕ್ಷಣ ಶಿಬಿರ ಸಂಪನ್ನ: ರಾಷ್ಟ್ರ ರಕ್ಷಣೆಗಾಗಿ ಸಜ್ಜಾದ ಹಿಂದೂ ತರುಣರ ಪಡೆ!
Har Ghar Yodha: The roar of Kshatriya Teja resounded in the soil of Ranebennur! Valor training camp
ರಾಣೆಬೆನ್ನೂರು 07: ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಆಯೋಜಿಸಲಾದ “ಹರ್ ಘರ್ ಯೋಧ” ಅಭಿಯಾನದ ಅಂಗವಾಗಿ ನಡೆದ ‘ಶೌರ್ಯ ಪ್ರಶಿಕ್ಷಣ ಶಿಬಿರ’ ಯಶಸ್ವಿಯಾಗಿ ಸಂಪನ್ನವಾಯಿತು. ಈ ಶಿಬಿರವು ನಗರದ ಶ್ರೀ ರಾಮನಗರದಲ್ಲಿರುವ ಸಾಯಿಬಾಬಾ ದೇವಸ್ಥಾನದ ಆವರಣದಲ್ಲಿ ಮೇ 1 ರಿಂದ 7ರ ವರೆಗೆ ನಡೆಯಿತು.
ಈ ಶಿಬಿರದಲ್ಲಿ 15 ರಿಂದ 40 ವರ್ಷದ ಯುವಕ-ಯುವತಿಯರು ಉತ್ಸಾಹಭರಿತವಾಗಿ ಭಾಗವಹಿಸಿ ಶಾರೀರಿಕ ತರಬೇತಿ, ಆತ್ಮರಕ್ಷಣಾ ಕೌಶಲ್ಯಗಳು ಹಾಗೂ ಆಧ್ಯಾತ್ಮಿಕ, ಧಾರ್ಮಿಕ ಮತ್ತು ರಾಷ್ಟ್ರೀಯ ಜಾಗೃತಿ ಕುರಿತ ಮಹತ್ವದ ಮಾರ್ಗದರ್ಶನವನ್ನು ಪಡೆದರು. ಶಿಬಿರದ ಮೂಲಕ ಯುವಕರು, ಯುವತಿಯರಲ್ಲಿ ಧೈರ್ಯ, ಶಿಸ್ತು ಮತ್ತು ದೇಶಭಕ್ತಿ ಮನೋಭಾವವನ್ನು ಬೆಳೆಸುವಲ್ಲಿ ವಿಶೇಷ ಒತ್ತು ನೀಡಲಾಯಿತು.ಈ ವಿಶೇಷ ಉಪಕ್ರಮದ ಅಂಗವಾಗಿ ಶಿಬಿರದಲ್ಲಿ ಭಾಗವಹಿಸಿದವರಿಗೆ ತರಬೇತಿ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಗಣ್ಯರಾದ ಶ್ರೀ. ಕೃಷ್ಣಾ ಸಾ ಪವಾರ, ರೂಪಾ ಪವಾರ, ದೀಪಾ,ಹಿಂದೂ ಜನಜಾಗೃತಿ ಸಮಿತಿಯ ಶ್ರೀ. ವಿಠೋಬಾ ಮಾಲ್ಸೇಕರ,ಅಶೋಕ ಭೋಜ ಮತ್ತು ಇತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿಉಪಸ್ಥಿತರಿದ್ದ ಪೋಷಕರು ಶಿಬಿರದ ಯಶಸ್ಸಿಗೆ ಸಂತೋಷ ವ್ಯಕ್ತಪಡಿಸಿ, ಇಂತಹ ಕಾರ್ಯಕ್ರಮಗಳು ಯುವಜನತೆಯಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರಲಿವೆ ಎಂದು ಅಭಿಪ್ರಾಯಪಟ್ಟರು.40 ಕ್ಕೂ ಹೆಚ್ಚು ಶಿಬಿರಾರ್ಥಿಗಳು ಉಪಸ್ಥಿತರಿದ್ದರು ಹಿಂದೂ ಜನಜಾಗೃತಿ ಸಮಿತಿ ಮುಂದೆಯೂ ಇಂತಹ ಸಮಾಜೋಪಯೋಗಿ ಹಾಗೂ ರಾಷ್ಟ್ರಭಕ್ತಿಯನ್ನು ಉತ್ತೇಜಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಎಂದು ತಿಳಿಸಿದರು.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 