ಲೋಕದರ್ಶನ ವರದಿ
ಹರಪನಹಳ್ಳಿ 26: ಮಂಗಳೂರಿನಲ್ಲಿ ನಡೆದ ಗಲಭೆ ಹಿಂದೆ ಷಡ್ಯಂತ್ರ ನಡೆದಿದ್ದು ಸಾಕ್ಷ್ಯಾಧಾರಗಳು ದೊರೆತಿವೆ ಎಂದು ಕೆಎಸ್ ಈಶ್ವರಪ್ಪ ಹೇಳಿಕೆ ನೀಡಿದ್ದಾರೆ
ಪಟ್ಟಣದಲ್ಲಿ ಟಿ.ಎಂ.ಎ.ಇ.ಸಂಸ್ಥೆಯ ಸುವರ್ಣ ಮಹೋತ್ಸವದ ಅಂಗವಾಗಿ ತೆಗ್ಗಿನಮಠದ ಲಿಂ.ಚಂದ್ರಮೌಳೇಶ್ವರ ಶಿವಾಚಾರ್ಯ ಸ್ವಾಮಿಯ ಐದನೇ ವಾರ್ಷಿಕ ಪುಣ್ಯಾರಾಧನೆ ಹಾಗೂ ಪಟ್ಟಾಧಿಕಾರ ಚತುರ್ಥ ವಾರ್ಷಿಕೋತ್ಸವ ಸಮಾರಂಭ
ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ ದೇಶದಲ್ಲಿ ಕಾಂಗ್ರೆಸ್ ಪಕ್ಷ ಮುಸ್ಲಿಂ ಸಮುದಾಯವನ್ನು ಎತ್ತಿಕಟ್ಟಿ ಪೌರತ್ವ ಕಾಯ್ದೆ ತಿದ್ದುಪಡಿ ವಿರುದ್ಧ ಪ್ರತಿಭಟನೆ ನಡೆಸುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವರು ಕೆಎಸ್ ಈಶ್ವರಪ್ಪ ಕಿಡಿಕಾರಿದರು
ದೇಶದಲ್ಲಿ ಕಾಂಗ್ರೆಸ್ ಪಕ್ಷ ಮುಸ್ಲಿಂ ಸಮುದಾಯವನ್ನು ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಕರ್ನಾಟಕ ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಚರ್ಚೆ ಆಗುತ್ತದೆ ಬ್ರಿಟಿಷರು ಭಾರತವನ್ನು ಇಬ್ಬಾಗ ಮಾಡಿದಾಗ ಪಾಕಿಸ್ತಾನದಲ್ಲಿದ್ದ ಹಿಂದುಗಳು ಅಲ್ಪಸಂಖ್ಯಾತರಾದರು ಸ್ವತಂತ್ರ ಪೂರ್ವದಲ್ಲಿ ಹಿಂದೂಗಳು ಪಾಕಿಸ್ತಾನದಲ್ಲಿ ಶೇ 19% ರಷ್ಟುಇದ್ದರೂ ಇಂದು ಪಾಕಿಸ್ತಾನದಲ್ಲಿ ಶೇ 1.5% ರಷ್ಟು ಮಾತ್ರ ಇದ್ದಾರೆ ಆದರೆ ಭಾರತದಲ್ಲಿ ಸ್ವತಂತ್ರ ಪೂರ್ವದಲ್ಲಿ ಮುಸ್ಲಿಮರು ಶೇ 3%ರಷ್ಟು ಇದ್ದರೆ ಈಗ ಶೇ 20% ರಷ್ಟು ಇದ್ದಾರೆ ಪೌರತ್ವ ತಿದ್ದುಪಡಿ ಕಾಯ್ದೆ ಭಾರತದ ಮುಸ್ಲಿಮರಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದರು