ಹರಪನಹಳ್ಳಿ: ಟಿಎಂಎಇ ಸಂಸ್ಥೆ ಸುವರ್ಣ ಮಹೋತ್ಸವ ಉದ್ಘಾಟನೆ ಬಿಎಸ್ವೈಗೆ ಆಹ್ವಾನ

ಲೋಕದರ್ಶನ ವರದಿ

ಹರಪನಹಳ್ಳಿ 15: ಪಟ್ಟಣದಲ್ಲಿ ಡಿ.24 ಮತ್ತು 25ರಂದು ತೆಗ್ಗಿನಮಠ ಸಂಸ್ಥಾನದ ಟಿಎಂಎಇ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದ್ದು, ಕಾರ್ಯಕ್ರಮವನ್ನು ಉದ್ಘಾಟಿಸಲು ಸನ್ಮಾನ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರನ್ನು ಆಹ್ವಾನಿಸಲಾಗಿದೆ ಎಂದು ತೆಗ್ಗಿನಮಠ ಸಂಸ್ಥಾನದ ವರಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದ್ದಾರೆ. 

ಸುವರ್ಣ ಮಹೋತ್ಸವ ಸಮಿತಿ ಕಾಯರ್ಾಧ್ಯಕ್ಷರಾದ ಸನ್ಮಾನ ಶಾಸಕ ಜಿ.ಕರುಣಾಕರರೆಡ್ಡಿ ಅವರೊಂದಿಗೆ ಬೆಂಗಳೂರಿನ ಡಾಲರ್ಸ  ಕಾಲೋನಿಯ ನಿವಾಸದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಆಹ್ವಾನ ನೀಡಿದಾಗ ಒಂದೆರಡು ದಿನಗಳಲ್ಲಿ ಈ ಕುರಿತು ತಿಳಿಸುವುದಾಗಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ. 

ರಾಜ್ಯಾದ್ಯಂತ ಶಿಕ್ಷಣ ಸಂಸ್ಥೆಗಳನ್ನು ತೆರೆದು ಎಲ್ಲಾ ವರ್ಗದ ಮಕ್ಕಳಿಗೆ ಅಕ್ಷರ ದೀಕ್ಷೆ ನೀಡಿರುವ ಸಂಸ್ಥೆಯ ಸುವರ್ಣ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಇಂತಹ ಅಮೃತ ಕ್ಷಣಗಳಿಗೆ ಸಾಕ್ಷಿಯಾಗಲು ವಿವಿಧ ಗಣ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ. ಕೇಂದ್ರ ರೈಲ್ವೆ ಸಚಿವ ಸುರೇಶ್ ಅಂಗಡಿ, ಉಪಮುಖ್ಯಮಂತ್ರಿ, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ್ ಸವದಿ, ಗೃಹ ಸಚಿವ ಬಸವರಾಜ್ ಬೊಮ್ಮಯಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ,  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು, ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ್, ಬಳ್ಳಾರಿ ಸಂಸದ ವೈ. ದೇವೇಂದ್ರಪ್ಪ, ನಿವೃತ್ತ ಪೊಲೀಸ್ ಅಧಿಕಾರಿ ಶಂಕರ್ ಬಿದರಿ, ಹಡಗಲಿಯ ಶಾಸಕ ಪಿ.ಟಿ. ಪರಮೇಶ್ವರನಾಯ್ಕ, ಹೊಸಪೇಟೆ ಶಾಸಕ ಅನಂದಸಿಂಗ್ ಸೇರಿದಂತೆ ಅನೇಕ ಗಣ್ಯರನ್ನು ಗೌರವಪೂರ್ವಕವಾಗಿ ಆಹ್ವಾನಿಸಲಾಗಿದೆ. 

ತೆಗ್ಗಿನಮಠ ಸಂಸ್ಥಾನ ಕೇವಲ ಧಾಮರ್ಿಕ ಕ್ಷೇತ್ರಕ್ಕೆ ಮೀಸಲಾಗದೇ ವಿದ್ಯೆ ದಾನದ ಜೊತೆಗೆ ಅನ್ನ ದಾಸೋಹ, ಆಶ್ರಯ ನೀಡುವ ಮೂಲಕ ಕೋಟ್ಯಾಂತರ ಮಕ್ಕಳ ಬದುಕಿಗೆ ಶ್ರೀಮಠ ಬೆಳಕಾಗಿದೆ. ಸಂಸ್ಥೆಯು 50  ವಸಂತಗಳನ್ನು ಪೂರೈಸಿ ಸುವರ್ಣ ಮಹೋತ್ಸವ ಸಂಭ್ರಮ ಆಚರಿಸುತ್ತಿರುವ ಶುಭ ಸಮಾರಂಭಕ್ಕೆ ಅನೇಕ ಹರ-ಗುರು ಚರಮೂರ್ತಗಳು, ಗಣ್ಯರು ಭಾಗವಹಿಸಲಿದ್ದಾರೆ