ಪರಿಶ್ರಮ ಉಜ್ವಲ ಬದುಕಿಗೆ ದಾರೀದೀಪ: ಎಂ.ಜಿ.ತಾಂವಶಿ
Hard work is the lamp to a bright life: M.G. Tamvashi
ಲೋಕದರ್ಶನ ವರದಿ
ಗೋಕಾಕ 02: ನಗರದ ಪ್ರತಿಷ್ಠಿತ ಗೋಕಾಕ ಶಿಕ್ಷಣ ಸಂಸ್ಥೆಯ ಜೆ.ಎಸ್.ಎಸ್. ಪದವಿ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ 2025-26 ನೇ ಸಾಲಿನ ಶೈಕ್ಷಣಿಕ- ಕ್ರೀಡಾ ವಿಭಾಗಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸುವ “ಪರಿಶ್ರಮ-ಪುರಸ್ಕಾರ” ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕರಾದ ಶ್ರೀ ಎಂ .ಜಿ. ತಾಂವಶಿರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಪರಿಶ್ರಮ ಉಜ್ವಲ ಬದುಕಿಗೆ ದಾರೀದೀಪವಾಗಿದೆ ಎಂದು ತಮ್ಮ ಅಭಿಮತ ವ್ಯಕ್ತಪಡಿಸಿದರು.
ಪ್ರಾಂಶುಪಾಲರಾದ ಡಾ. ಬಿ. ಎಂ. ತುರಡಗಿರವರು ಮಾತನಾಡಿ, ನಿರಂತರ ಪರಿಶ್ರಮದ ಮೂಲಕ ಸಾಧನೆ ಮಾಡಿ ಮಹಾವಿದ್ಯಾಲಯದ ಕೀರ್ತಿ ಹೆಚ್ಚಿಸಿದ ವಿದ್ಯಾರ್ಥಿಗಳನ್ನು ಶ್ಲಾಘಿಸಿದರು. ಸಂಸ್ಥೆಯ ಕಾರ್ಯದರ್ಶಿಗಳಾದ ಆರ್.ಎಂ.ವಾಲಿರವರು ವಿದ್ಯಾರ್ಥಿಗಳನ್ನು ಮತ್ತು ಪೋಷಕರನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಪದವಿ ಪರೀಕ್ಷೆಗಳಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ದ್ವಿತೀಯ ರಾ್ಯಂಕ ಪಡೆದ ವಿದ್ಯಾರ್ಥಿಗಳಾದ ಕು.ರೂಪಾ.ಬಿ.ತಳಕಟನಾಳ ಮತ್ತು ಸ್ವರ್ಣಪದಕ ಪಡೆದ ತಿಲಕ ಸಿಂಗ ರಜಪೂತ, ಅಂ ಪರೀಕ್ಷೆಗಳಲ್ಲಿ ತೇರ್ಗಡೆಯಾದ ಸ್ವಾತಿ ಜಿ. ನಿಡೋಣಿ ಮತ್ತು ಸುರೇಖಾ ಜಿ. ಚೌಧರಿ, K-SET 2025 ಪರೀಕ್ಷೆಗಳಲ್ಲಿ ತೇರ್ಗಡೆಯಾದ ಪದ್ಮಶ್ರೀ ಬೆಳವಿ, ಸಾಗರ ಕಳ್ಳಿಗುದ್ದಿ, ಕು.ಆಫಶಾ ಪಾಚ್ಛಾಪುರ, ಉದ್ದವ್ವಾ ಬಂಡಿ, ರಂಜನಾ ಸಂಗೋಳ್ಳಿ, ಸುನೀಲ ಧರ್ಮಟ್ಟಿ ಹಾಗೂ ಕ್ರೀಡಾ ವಿಭಾಗಗಳಲ್ಲಿ ಯುನಿವರ್ಸಿಟಿ ಬ್ಲೂ ಆಗಿ ವಿಜೇತರಾದ ಗಂಗಾಧರ ಲಕ್ಕನ್ನವರ, ಭಾವನಾ ಕೌಜಲಗಿ ಮತ್ತು ಗುರುನಾಥ ಮದಲಬಾವಿ ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಸಮಾರಂಭದಲ್ಲಿ ಮುರುಗೇಶ ತಾಂವಶಿ, ಉಪಪ್ರಾಂಶುಪಾಲರಾದ ಡಾ.ಆರ್.ಎಸ್.ಬಳಿಗಾರ, ಗುರುರಾಜ ನಿಡೋನಿ ಉಪಸ್ಥಿತರಿದ್ದರು. ಪ್ರತಿಭಾವಂತ ವಿದ್ಯಾರ್ಥಿಗಳ ಪೋಷಕರು, ಬೋಧಕ ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಡಾ. ಕೃಷ್ಣಮೂರ್ತಿ ಎಂ.ಎಸ್. ನಿರ್ವಹಿಸಿದರೆ, ಎಂ. ವಿ. ಗೊರಗುದ್ದಿ ವಂದಿಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 