ಚಂಡೀಗಡ, ಆ 20 ಕಳೆದ ಕೆಲ ದಿನಗಳಿಂದ ಎಡೆಬಿಡೆದೆ ಸುರಿಯುತ್ತಿರುವ ಮಳೆಯಿಂದಾಗಿ ಹರಿಯಾಣದಲ್ಲಿ ಯಮುನಾ ನದಿ ಉಕ್ಕಿ ಹರಿಯುತ್ತಿದ್ದು, ನೀರಿನ ಮಟ್ಟ 8.28 ಲಕ್ಷ ಕ್ಯೂಸೆಕ್ ದಾಖಲೆ ಪ್ರಮಾಣದಷ್ಟು ಹೆಚ್ಚಿದೆ
ಪ್ರವಾಹ ಭೀತಿ ಉಂಟಾಗಿರುವ ಹಿನ್ನೆಲೆಯಲ್ಲಿ ಸೋನಿಪತ್, ಕರ್ನಲ್ ಜಿಲ್ಲೆಗಳ 25 ಕುಟುಂಬಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಹರಿಯಾಣ ಮುಖ್ಯ ಕಾರ್ಯದರ್ಶಿ ಕೇಶನಿ ಆನಂದ್ ಅರೋರಾ ಮಂಗಳವಾರ ಮಾಹಿತಿ ನೀಡಿದ್ದಾರೆ
ಹರಿಯಾಣ, ಪಂಜಾಬ್, ಉತ್ತರಾಖಂಡ, ಹಿಮಾಚಲ ಪ್ರದೇಶ ಮತ್ತು ದೆಹಲಿಯ ಪ್ರವಾಹ ಪರಿಸ್ಥಿತಿ ಕುರಿತು ಕೇಂದ್ರ ಸಂಪುಟ ಕಾರ್ಯದರ್ಶಿ ಪ್ರದೀಪ್ ಕುಮಾರ್ ಸಿನ್ಹಾ ನೇತೃತ್ವದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ ಬಳಿಕ ಅವರು ಈ ವಿಷಯ ತಿಳಿಸಿದ್ದಾರೆ
ಯಮುನಾ ನದಿಯ ಪ್ರವಾಹದ ನೀರು ದೆಹಲಿಯ ನಂತರ ಫರಿದಾಬಾದ್, ಪಲ್ವಾಲ್ ಜಿಲ್ಲೆಗಳಿಗೂ ನುಗ್ಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ತಗ್ಗು ಪ್ರದೇಶಗಳಲ್ಲಿರುವ 500 ಕುಟುಂಗಳನ್ನು ಈಗಾಗಲೇ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದ್ದಾರೆ.