ಹಸೀನಾ ಮುಲ್ಲಾ ಗೆ ಕಿತ್ತೂರ ರಾಣಿ ಚೆನ್ನಮ್ಮ ಸದ್ಭಾವನಾ ಪ್ರಶಸ್ತಿ
ದೇವರ ಹಿಪ್ಪರಗಿ 16: ಕೊಂಡಗೂಳಿ ಗ್ರಾಮದ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿಯರಾಗಿರುವ ಹಸೀನಾ ಮುಲ್ಲಾ ಇವರಿಗೆ ರಾಜ್ಯಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಮಹಿಳಾ ಸದ್ಭಾವನಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.ಗದಗ ನಗರದ ಜಗದ್ಗುರು ತೊಂಟದಾರ್ಯ ಮಠದ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ನೀಡಲಾಯಿತು.ಅನೇಕ ಸಾಧಕ ಮಹಿಳೆಯರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.ಮಹಿಳಾ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷೆ ಲತಾ ಬಿರಾದಾರ, ಪ್ರಜಾಪಿತ ಬ್ರಹ್ಮಕುಮಾರಿ ಆಶ್ರಮದ ಜಯಂತಿ ಅಕ್ಕ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.