ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಿ

ಶಿಗ್ಗಾವಿ 09: ಪರೀಕ್ಷೆ ಎಂದರೆ ಭಯದ ವಾತಾವರಣವಿರಬಾರದು ಅದು ಒಂದು ಆಟದ ಮೈದಾನ ಎಂಬ ಭಾವನೆಯನ್ನು ವಿದ್ಯಾಥರ್ಿಗಳು ಬೆಳೆಸಿಕೊಳ್ಳಬೇಕು ಅಂದಾಗ ಮಾತ್ರ ಯಾವುದೇ ಭಯ ಭೀತಿ ಇಲ್ಲದೆ ಪರೀಕ್ಷೆಯನ್ನು ಎದುರಿಸಿ ಯಶಸ್ಸನ್ನು ಸಾಧಿಸಬಹುದು ಎಂದು ಚನ್ನಪ್ಪ ಕುನ್ನೂರ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದಶರ್ಿ ರಾಜು ಎಂ ಕುನ್ನೂರ ಹೇಳಿದರು. ಪಟ್ಟಣದ ಶ್ರೀ ಚನ್ನಪ್ಪ ಕುನ್ನೂರ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಉನ್ನತೀಕರಣಕ್ಕಾಗಿ ಎರಡು ದಿನಗಳಿಂದ ನಡೆದ ವಿಷಯಾಧಾರಿತ ತರಬೇತಿ ಕಾಯರ್ಾಗಾರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು ವಿದ್ಯಾಥರ್ಿಗಳು ಪರೀಕ್ಷೆವರೆಗೂ ಉತ್ಸಾಹವನ್ನು ಕಳೆದುಕೊಳ್ಳದೆ ಅಧ್ಯಯನದಲ್ಲಿ ತೊಡಗಿಸಿಕೊಂಡರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಅಭಿಪ್ರಾಯಪಟ್ಟರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ನಾಗರಾಜ ದ್ಯಾಮನಕೊಪ್ಪ ಇಂಥ ಕಾಯರ್ಾಗಾರಗಳು ವಿದ್ಯಾಥರ್ಿಗಳ ಮೇಲೆ ಪ್ರಭಾವ ಬೀರುವುದರೊಂದಿಗೆ ಪರೀಕ್ಷೆಯಲ್ಲಿ ಹೆಚ್ಚಿನ ಸಾಧನೆಗೆ ಸಹಕಾರಿಯಾಗಲಿವೆ ಎಂದು ಹೇಳಿದರು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಶಿಗ್ಗಾವಿ ಸರಕಾರಿ ಕಾಲೇಜಿನ ಉಪನ್ಯಾಸಕ ಎಂ ಆರ್ ಚೂರಿ ಧಾರವಾಡದ ಶಾರದಾ ಕಾಲೇಜಿನ ಉಪನ್ಯಾಸಕ ನಾಗರಾಜ ಹೆಗಡೆ ಯವರನ್ನು ಸನ್ಮಾನಿಸಲಾಯಿತು