ಹಾವೇರಿ: ಬಸ್ ನಿಲ್ದಾಣದಲ್ಲಿ ಭೀಕರ ಅಪಘಾತ - ಮೂರು ವರ್ಷದ ಮಗು ದಾರುಣ ಸಾವು
Haveri: Terrible accident at bus stand - three-year-old child dies tragically
ಹಾವೇರಿ: ಮುಂಜಾನೆ ಜಿಲ್ಲಾ ಕೇಂದ್ರದ ಬಸ್ ನಿಲ್ದಾಣದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂರು ವರ್ಷದ ಹಸುಗೂಸು ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ.ಬುಧವಾರ ಮುಂಜಾನೆ ಸುಮಾರು 6 ಗಂಟೆಯ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಲೋಕವನ್ನೇ ಅರಿಯದ ಮೂರು ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.3 ವರ್ಷದ ಮಗು. ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾವೇರಿ ಕೇಂದ್ರ ಬಸ್ ನಿಲ್ದಾಣ.ಘಟನೆಗೆ ಸಂಬಂಧಿಸಿದಂತೆ ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ಕೈಗೊಂಡಿದ್ದಾರೆ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 