ಕೇರಳದಲ್ಲಿ ನಡೆಯುವ ಎಸ್‌ಎಫ್‌ಐ ರಾಷ್ಟ್ರೀಯ ಸಮ್ಮೇಳನಕ್ಕೆ ಹಾವೇರಿ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಆಯ್ಕೆ
Haveri District President Basavaraja S selected for SFI National Conference to be held in Kerala
ಕೇರಳದಲ್ಲಿ ನಡೆಯುವ ಎಸ್‌ಎಫ್‌ಐ ರಾಷ್ಟ್ರೀಯ ಸಮ್ಮೇಳನಕ್ಕೆ ಹಾವೇರಿ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಆಯ್ಕೆ
ಹಾವೇರಿ 25 : "ಶಿಕ್ಷಣ ನಮ್ಮ ಹಕ್ಕು, ಏಕತೆಯೇ ದಾರಿ, ವೈವಿಧ್ಯತೆಯೇ ಶಕ್ತಿ" ಪ್ರಮುಖ ಘೋಷಣೆಯಡಿಯಲ್ಲಿ ಜೂನ್ 27 ರಿಂದ 30ರ ವರೆಗೆ ಕೇರಳದ ಕೋಝಿಕ್ಕೋಡ್ ನಲ್ಲಿ ನಡೆಯುವ 18ನೇ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಅಖಿಲ ಭಾರತ ಸಮ್ಮೇಳನಕ್ಕೆ ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಆಯ್ಕೆಯಾಗಿದ್ದಾರೆ.ಸರ್ವರಿಗೂ ಶಿಕ್ಷಣ ಸರ್ವರಿಗೂ ಉದ್ಯೋಗ ಸರ್ವರಿಗೂ ಸಮಪಾಲು ವಿದ್ಯಾರ್ಥಿಗಳ ಪ್ರಜಾಸತ್ತಾತ್ಮಕ ಹಕ್ಕುಗಳಿಗಾಗಿ ಆಗ್ರಹಿಸಿ. ರಾಷ್ಟ್ರವನ್ನು ತಲ್ಲಣಗೊಳಿಸುತ್ತಿರುವ ಭಯೋತ್ಪಾದನೆ, ಕೋಮುವಾದ, ಭ್ರಷ್ಟಾಚಾರ, ನಿರುದ್ಯೋಗ, ಬಡತನ, ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಅಪಾಯಗಳು ಹಲವಾರು ವಿಷಯಗಳು ಸೇರಿದಂತೆ ವಿಚಾರ ಸಂಕೀರ್ಣ ಚರ್ಚೆಗೋಷ್ಠಿ ನಡೆಯುತ್ತಿದ್ದು, ನಾಲ್ಕು ದಿನಗಳ ಕಾಲ ನಡೆಯುವ ಈ ಸಮ್ಮೇಳನದಲ್ಲಿ ಶಿಕ್ಷಣ ಕ್ಷೇತ್ರದ ಖಾಸಗೀಕರಣ, ವ್ಯಾಪಾರಿಕರಣ, ಭ್ರಷ್ಟಾಚಾರ, ಖಾಸಗಿ ವಿದೇಶ ವಿಶ್ವವಿದ್ಯಾಲಯಗಳು ಆಗಮಿಸುತ್ತಿರುವುದನ್ನು ವಿರೋಧಿಸಿ ಅಲ್ಲದೇ ವಿದ್ಯಾರ್ಥಿಗಳು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಪರಿಹಾರದ ಕುರಿತು ದೇಶದ ವಿವಿಧ ರಾಜ್ಯಗಳಿಂದ ಹಾಗೂ ವಿಶ್ವವಿದ್ಯಾಲಯಗಳಿಂದ ವಿದ್ಯಾರ್ಥಿ ಮುಖಂಡರುಗಳೊಂದಿಗೆ ಚರ್ಚೆ ನಡೆಯಲಿದೆ.ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗಾಗಿ ಸಮ್ಮೇಳನದಲ್ಲಿ ಮಾರ್ಗದರ್ಶನ ಮಾಡುತ್ತಿದ್ದು, ಈ ಸಮ್ಮೇಳನಕ್ಕೆ ಎಸ್‌ಎಫ್‌ಐನ ಹಾವೇರಿ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಆಯ್ಕೆಯಾಗಿದ್ದು, ಶಿಕ್ಷಣ ಕ್ಷೇತ್ರದಲ್ಲಿರುವ ಸಮಸ್ಯೆಗಳನ್ನು ಚರ್ಚಿಸಿ ಶಿಕ್ಷಣ ಕ್ಷೇತ್ರವನ್ನು ಬಲಪಡಿಸಿ ಸಂಘಟನೆಯನ್ನು ಬಲಪಡಿಸಲು ಜಿಲ್ಲೆಗೆ ಅನುಕೂಲವಾಗಲಿದೆ ಎಂದು ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ದುರುಗಪ್ಪ ಯಮ್ಮಿಯವರ, ಜಿಲ್ಲಾ ಉಪಾಧ್ಯಕ್ಷ ಗೌತಮ್ ಸಾವಕ್ಕನವರ, ಜಿಲ್ಲಾ ಸಹ ಕಾರ್ಯದರ್ಶಿ ಕೃಷ್ಣ ನಾಯ್ಕ ತಿಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 