ಹಾವೇರಿ ಮೆಡಿಕಲ್ ಕಾಲೇಜಿಗೆ ಕೇಂದ್ರ ಸರಕಾರ ರೂ.195 ಕೋಟಿ ಬಿಡುಗಡೆಗೆ ಒಪ್ಪಿಗೆ: ಬೊಮ್ಮಾಯಿ

ಹಾವೇರಿ: ಜಿಲ್ಲೆಯಲ್ಲಿ ಘೋಷಣೆಯಾಗಿ ನೆನೆಗುದಿಗೆ ಬಿದ್ದಿದ್ದ ಮೆಡಿಕಲ್ ಕಾಲೇಜು ಸ್ಥಾಪನೆಗೆ ಕೇಂದ್ರ ಸಕರ್ಾರ ಮಂಜೂರಾತಿ ನೀಡಿ 195 ಕೋಟಿ ರೂ. ಅನುದಾನ ಬಿಡುಗಡೆಗೆ ಒಪ್ಪಿಗೆ ಸೂಚಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಗೃಹ, ಸಹಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

        ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಿಂದಿನ ನಮ್ಮ ಸಕರ್ಾರದ ಅವಧಿಯಲ್ಲಿ ಘೋಷಣೆಯಾಗಿದ್ದ ಕಾಲೇಜು ಇನ್ನೂ ಆರಂಭಗೊಂಡಿರಲಿಲ್ಲ, ಈಗ ಅದಕ್ಕೆ ಮುಹೂರ್ತ ಕೂಡಿಬಂದಿದೆ. ದೀಪಾವಳಿ ಹಬ್ಬದ ಉಡುಗೊರೆಯಂತೆ ಬಹುದಿನಗಳ ಬೇಡಿಕೆ ಈಡೇರಿದೆ ಎಂದಿದ್ದಾರೆ.

       ಜಿಲ್ಲೆಯಲ್ಲಿ 325 ಕೋಟಿ ರೂ., ವೆಚ್ಚದಲ್ಲಿ ಮೆಡಿಕಲ್ ಕಾಲೇಜ್ ಆರಂಭಿಸಲು ನಿರ್ಣಯಿಸಲಾಗಿದ್ದು, ಶೇ. 60ರಷ್ಟು ಕೇಂದ್ರ ಸಕರ್ಾರದ ಪಾಲು ಅಂದರೆ 195 ಕೋಟಿ ಹಣ ಮಂಜೂರಾತಿಗೆ ಕೇಂದ್ರ ಸಕರ್ಾರ ಅನುಮೋದಿಸಿದೆ. ರಾಜ್ಯ ಸಕರ್ಾರವೂ 130 ಕೋಟಿ ರೂ. ಹಣ ಬಿಡುಗಡೆ ಮಾಡಲಿದೆ. ನಮ್ಮ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೂ ವಿಶೇಷವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ.

      ಹಾವೇರಿ ನಗರದಲ್ಲಿ ತಜ್ಞರು ಗುರುತಿಸುವ ಜಾಗೆಯಲ್ಲೇ ಶೀಘ್ರದಲ್ಲಿ ಕಾಲೇಜು ಆರಂಭಕ್ಕೆ ಶಂಕು ಸ್ಥಾಪನೆ ನೆರವೇರಿಸಲಾಗುವುದು ಎಂದರು.