ಹಾವೇರಿ20: ಜಿಲ್ಲಾ ಕೋವಿಡ್-19 ಆಸ್ಪತ್ರೆಗೆ ಭೇಟಿ ನೀಡಿದ ಗೃಹ ಖಾತೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಯ ಮೂಲಕ ಸೌಕರ್ಯಗಳು, ಕೋವಿಡ್ ವ್ಯಕ್ತಿಗಳಿಗೆ ಚಿಕಿತ್ಸಾ ಕ್ರಮ, ಹೊಸ ವೆಂಟಿಲೇಟರ್ ವ್ಯವಸ್ಥೆ, ಹಾಸಿಗೆ ಸೌಲಭ್ಯ ಸೇರಿದಂತೆ ವಿವಿಧ ಸೌಕರ್ಯಗಳ ವೀಕ್ಷಣೆ ವೈದ್ಯರಿಂದ ಮಾಹಿತಿ ಪಡೆದರು.
ಮಂಗಳವಾರ ಮಧ್ಯಾಹ್ನ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಕೋವಿಡ್ ಆಸ್ಪತ್ರೆ ವಾಡರ್್ಗಳ ವೀಕ್ಷಣೆಗೆ ಮುನ್ನ ಪಿಪಿ ಕಿಟ್ ಧರಿಸಿ ಎಲ್ಲರ ಗಮನ ಸೆಳೆದರು. ಸಚಿವರೊಂದಿಗೆ ವೈದ್ಯರು ಕೋವಿಡ್ ವಾಡರ್್ಗಳ ಡ್ಯೂಟಿಯಲ್ಲಿರುವ ಪೊಲೀಸ್ರು ಪಿಪಿ ಕಿಟ್ಗಳನ್ನು ಧರಿಸಿ ಎಲ್ಲರ ಗಮನ ಸೆಳೆಯುವುದರ ಜೊತೆಗೆ ಕೋವಿಡ್ ರಕ್ಷಣೆಯೊಂದಿಗೆ ವ್ಯವಹರಿಸುವ ಕುರಿತಂತೆ ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಈಗಾಗಲೇ ಜಿಲ್ಲೆಗೆ ಹೊಸದಾಗಿ 11 ವೆಂಟಿಲೇಟರ್ಗಳು ತರಿಸಲಾಗಿದೆ. 58 ಬೆಡ್ಗಳಿಗೆ ಕೇಂದ್ರೀಕೃತ ಪ್ರಸರೈಸ್ ಆ್ಯಕ್ಸಿಜನ್ ವ್ಯವಸ್ಥೆ ಕಲ್ಪಿಸಲಾಗಿದೆ. ಕೋವಿಡ್ ಸೋಂಕು ಪರೀಕ್ಷಾಲಯ ಸ್ಥಾಪನೆ ಕಾರ್ಯ ಪ್ರಗತಿಯಲ್ಲಿದೆ. ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಾಸಿಟಿವ್ ವ್ಯಕ್ತಿಗಳು ಆರೋಗ್ಯ ಸುಧಾರಣೆಗೊಳ್ಳುತ್ತಿದೆ. 14 ದಿನಕ್ಕೆ ಅವರನ್ನು ಬಿಡುಗಡೆಗೊಳಿಸಲು ಕ್ರಮವಹಿಸಲಾಗುವುದು. 12ನೇ ದಿನಕ್ಕೆ ಮತ್ತೊಮ್ಮೆ ಲ್ಯಾಬ್ ಪರೀಕ್ಷೆಗೆ ಕಳುಹಿಸಲಾಗುವುದು ಎಂದು ತಿಳಿಸಿದರು.
ಗ್ರೀನ್ ಜೋನ್ನಲ್ಲಿದ್ದ ಹಾವೇರಿ ಜಿಲ್ಲೆಗೆ ಮುಂಬೈನಿಂದ ಬಂದ ವಕ್ತಿಗಳಲ್ಲಿ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿರವುದು ದುದರ್ೈದ ಸಂಗತಿಯಾಗಿದೆ. ಸವಣೂರ ಸೋಂಕಿತ ವ್ಯಕ್ತಿಗಳ ಪ್ರಾಥಮಿಕ ಹಾಗೂ ಎರಡನೇ ಹಂತದ ಸಂಪರ್ಕ ವ್ಯಕ್ತಿಗಳ ಕೋವಿಡ್ ತಪಾಸಣೆ ನಡೆಸಲಾಗಿದ್ದು.
ಎಲ್ಲರ ವರದಿ ಸಹ ನೆಗಟಿವ್ ಬಂದಿವೆ. ಅದೇ ರೀತಿ ಅಂದಲಗಿ ಪ್ರಕಣದದಲ್ಲಿ ಪ್ರಾಥಮಿಕ ಹಾಗೂ ಎರಡನೇ ಹಂತದ ಸಂಪರ್ಕ ವ್ಯಕ್ತಿಗನ್ನು ಕ್ವಾರಂಟೈನ್ ಮಾಡಲಾಗಿದೆ ಹಾಗೂ ಕೋವಿಡ್ ತಪಾಸಣೆ ನಡೆಸಲಾಗುತ್ತಿದೆ. ಕಂಟೋನ್ಮೆಂಟ್ ಜೋನ್ನಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕ್ವಾರಂಟೈನ್ ಕೇಂದ್ರಗಳ ಮೇಲೆ ಹಾಗೂ ವಿಶೇಷವಾಗಿ ಹೊರಗಡೆಯಿಂದ ಬರುವವರ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ. ಮುಂದಿನ ದಿನಗಳಲ್ಲಿ ಹಾವೇರಿ ಜಿಲ್ಲೆಯನ್ನು ಗ್ರೀನ್ ಜಿಲ್ಲೆಯಾಗಿಸಲು ಜಿಲ್ಲಾಡಳಿತ ಅಗತ್ಯ ಕ್ರಮಕೈಗೊಂಡಿದೆ ಎಂದು ತಿಳಿಸಿದರು.
ಲಾಕ್ಡೌನ್ ಸಂದರ್ಭದಲ್ಲಿ ರಾಜ್ಯ ಹಾಗೂ ಜಿಲ್ಲಾ ಗಡಿ ಭಾಗದಲ್ಲಿ ನಿಯಂತ್ರಣ ಕಾರ್ಯದಲ್ಲಿ ಪೊಲೀಸ್ ಇಲಾಖೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುತ್ತಿದೆ. ಆಸ್ಪತ್ರೆ, ಸಾರ್ವಜನಿಕ ಸ್ಥಳಗಳಲ್ಲಿ, ಬಸ್ ನಿಲ್ದಾಣ ಹಾಗೂ ಚೆಕ್ಪೋಸ್ಟ್ಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಇಲಾಖೆಯ ಸಿಬ್ಬಂದಿಗಳ ತಪಾಸಣೆ ಸೂಚಿಸಲಾಗಿದೆ ಹಾಗೂ ಈ ಸಿಬ್ಬಂದಿಗೆ ಪಿಪಿ ಕೊಡಲು ತೀಮರ್ಾನಿಸಲಾಗಿದೆ ಎಂದು ತಿಳಿಸಿದರು.
ಅಂತರ್ ಜಿಲ್ಲಾ ಪ್ರವಾಸಕ್ಕೆ ಯಾವುದೇ ಅತಡೆಗಡೆಗಳಲ್ಲಿ. ಆದರೆ ಅಂತರಾಜ್ಯ ಪ್ರಯಾಣಕ್ಕೆ ಕಡ್ಡಾಯವಾಗಿ ಸೇವಾ ಸಿಂಧು ನೊಂದಣಿ ಮೂಲಕ ಪಾಸ್ ಪಡೆಯಬೇಕು. ಕ್ವಾರಂಟೈನ್ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳ ಲೋಪದ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೆಚ್ಚಿನ ಸಂಖ್ಯೆಯಲ್ಲಿ ಹೊರ ರಾಜ್ಯದವರು ಬಂದ ಸಂದರ್ಭದಲ್ಲಿ ವ್ಯತ್ಯಾಸವಾಗಿರಬಹುದು.
ಆದಾಗ್ಯೂ ಕ್ವಾರಂಟೈನ್ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು. ಅದೇ ಶ್ರದ್ಧಾಂಜಲಿ ವಾಹನ ಸೇವೆ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಶ್ರದ್ಧಾಂಜಲಿ ವಾಹನ ಚಾಲನೆಗೆ ಶೀಘ್ರ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕರಾದ ನೆಹರು ಓಲೇಕಾರ, ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಣಾಧಿಕಾರಿ ರಮೇಶ ದೇಸಾಯಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಂದ್ರ ದೊಡ್ಮನಿ, ಪ್ರಭಾರ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಹಾವನೂರ ಇತರರು ಉಪಸ್ಥಿತರಿದ್ದರು