ಹಾವೇರಿ ಜಿಲ್ಲೆ ಬಿಜೆಪಿ ಮುಕ್ತವಾಗಿದ್ದು, ಜನ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ನೀಡಿದ್ದಾರೆ
Haveri district is BJP-free, people have given majority to Congress party
ಲೋಕದರ್ಶನ ವರದಿ
ಹಾನಗಲ್ 16: ಕಳೆದ ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷ ನೀಡಿದ ಎಲ್ಲ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದೇನೆ. ಎರಡು ಬಾರಿ ವಿಧಾನ ಪರಿಷತ್, ಎರಡು ಬಾರಿ ವಿಧಾನಸಭೆ ಪ್ರವೇಶಿಸಿರುವ ತಮಗೆ ಸಚಿವ ಸಂಪುಟ ವಿಸ್ತರಣೆಯಾದರೆ ಅವಕಾಶ ಸಿಗುವ ವಿಶ್ವಾಸವಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಾವೇರಿ ಜಿಲ್ಲೆಯ ಎಲ್ಲ ಆರೂ ಸ್ಥಾನಗಳಲ್ಲಿ ಸಹ ಕಾಂಗ್ರೆಸ್ ಶಾಸಕರಿದ್ದು ಜನರ ಆಶೀರ್ವಾದ ನಮ್ಮ ಮೇಲಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಬಿ.ಸಿ.ಪಾಟೀಲ ಸೇರಿದಂತೆ ಬಿಜೆಪಿಯ ಘಟಾನುಘಟಿಗಳು ಜಿಲ್ಲೆಯಲ್ಲಿದ್ದಾರೆ. ಇವರೆಲ್ಲರ ನಡುವೆ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲಪಡಿಸಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಎಲ್ಲ ಆರೂ ಸ್ಥಾನಗಳಲ್ಲಿ ಗೆಲ್ಲಿಸಬೇಕಿದೆ. ಹಾಗಾಗಿ ಜಿಲ್ಲೆಗೆ ಸಚಿವ ಸ್ಥಾನ ನೀಡುವ ಅಗತ್ಯ ಹೆಚ್ಚಿದೆ ಎಂದು ಅವರು ತಿಳಿಸಿದರು.
ಹಾವೇರಿ ಜಿಲ್ಲೆ ಬಿಜೆಪಿ ಮುಕ್ತವಾಗಿದ್ದು, ಜನ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ನೀಡಿದ್ದಾರೆ. ಅಷ್ಟಾದರೂ ನಾವು ಸುಮ್ಮನೆ ಕೂಡುವಂತಿಲ್ಲ. ಜನರ ನಮ್ಮ ಮೇಲೆ ಇಟ್ಟಿರುವ ವಿಶ್ವಾಸ ಉಳಿಸಿಕೊಂಡು ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಬೇಕಿದೆ. ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಸಾಕಷ್ಟು ಸವಾಲುಗಳು ನಮ್ಮ ಮುಂದಿವೆ. ಜಿಲ್ಲೆಯ ಒಬ್ಬರಿಗೆ ಸಚಿವ ಸ್ಥಾನ ಕೊಟ್ಟರೆ ಸವಾಲುಗಳನ್ನು ಎದುರಿಸಿ ಮುಂಬರುವ ಚುನಾವಣೆಗೆ ಸಿದ್ಧರಾಗಲು ಅನುಕೂಲವಾಗಲಿದೆ. ಈ ಎಲ್ಲ ಅಂಶಗಳನ್ನು ಹೈಕಮಾಂಡ್ ಪರಿಗಣಿಸುವ ವಿಶ್ವಾಸವಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಪಕ್ಷದ ಸಿದ್ಧಾಂತಗಳನ್ನು ಒಪ್ಪಿ ಯುವ ಕಾಂಗ್ರೆಸ್ ಸಂಘಟನೆಯ ಮೂಲಕ ಕೆಲಸ ಆರಂಭಿಸಿರುವ ನಾನು 2004 ರಿಂದ 2011 ರ ವರೆಗೆ ಯುವ ಕಾಂಗ್ರೆಸ್‌ನ ರಾಜ್ಯ ಉಪಾಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ನಂತರ ಎರಡು ಅವಧಿ ವಿಧಾನ ಪರಿಷತ್ ಸದಸ್ಯನಾಗಿ ಸೇವೆ ಸಲ್ಲಿಸಿದ್ದೇನೆ. ಈಗ ಹಾನಗಲ್ ಕೇತ್ರದಿಂದ ಎರಡನೆ ಅವಧಿಯಲ್ಲಿ ವಿಧಾನಸಭೆ ಸದಸ್ಯನಾಗಿದ್ದೇನೆ. ಸಚಿವನಾಗುವ ಅರ್ಹತೆ ನನಗಿದೆ. ಜಿಲ್ಲೆಗೆ ಸಚಿವ ಸ್ಥಾನ ಕೊಟ್ಟರೆ, ನನ್ನನ್ನೂ ಪರಿಗಣಿಸುವಂತೆ ವರಿಷ್ಠರನ್ನು ಕೋರಿದ್ದೇನೆ ಎಂದರು.
ಸಚಿವ ಸ್ಥಾನದ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಎಲ್ಲರೂ ಒಗ್ಗಟ್ಟಾಗಿದ್ದೇವೆ. ಹಿರಿಯ ನಾಯಕರ ಮುಂದಾಳತ್ವದಲ್ಲಿ ಮುನ್ನಡೆಯುತ್ತಿದ್ದೇವೆ. ಜಿಲ್ಲೆಯ ಯಾರಿಗಾದರೂ ಸ್ಥಾನ ಸಿಕ್ಕರೂ ಸಂತೋಷವಿದೆ. ಎಲ್ಲರೂ ಒಟ್ಟಿಗೆ ಸೇರಿ ಪಕ್ಷವನ್ನು ಬಲಪಡಿಸಿ ಮುಂದಿನ ವಿಧಾನಸಭೆ ಚುನಾವಣೆಗೆ ಅಣಿಗೊಳಿಸುತ್ತೇವೆ. ಒಟ್ಟಾರೆ ಜಿಲ್ಲೆಗೆ ಸಚಿವ ಸ್ಥಾನ ಸಿಗಬೇಕು ಎನ್ನುವುದು ಹಕ್ಕೊತ್ತಾಯವಾಗಿದೆ ಎಂದು ವಿವರಿಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 