ಮೈಸೂರು, ಡಿ 29 ಪೇಜಾವರ ಶ್ರೀಗಳು ಸಮಾಜ ಸುಧಾರಣೆಗಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದರು ಎಂದು ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಟದತ್ತ ಚಾಮರಾಜ ಒಡೆಯರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪೇಜಾವರ ಶ್ರೀ ಸ್ವಾಮೀಜಿ ನಿಧನದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೇಜಾವರ ಸ್ವಾಮೀಜಿ ಮತ್ತು ಜಯಚಾಮರಾಜ ಒಡೆಯರ್ ಅವರ ಹಳೆಯ ಭಾವಚಿತ್ರವೊಂದು ಶೇರ್ ಮಾಡಿ ಮೂಲಕ ಸಂತಾಪ ಸೂಚಿಸಿದ ಅವರು, ಶ್ರೀಗಳು ದೈವಾದೀನರಾಗಿರುವುದು ಬಹಳ ದುಃಖವಾಗಿದೆ. ಬಾಲ್ಯದಲ್ಲೇ ತಮ್ಮ ವೈಯಕ್ತಿಕ ಜೀವನವನ್ನು ಅವರು ತ್ಯಜಿಸಿದರು ಎಂದರು. ಶ್ರೀಗಳು 80 ವರ್ಷಗಳ ಕಾಲ ಕೃಷ್ಣನ ಸೇವೆ ಮಾಡಿದ್ದಾರೆ.ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಚಾಮುಂಡೇಶ್ವರಿ ತಾಯಿ ಭಕ್ತರಿಗೆ ನೀಡಲಿ ಎಂದು ಪ್ರಾರ್ಥಿಸಿದರು.