ಮುಖ್ಯ ಶಿಕ್ಷಕ ಪಿ. ಗಂಗೇಶ್ ಸೇವಾ ನಿವೃತ್ತಿ : ಹೃದಯಸ್ಪರ್ಶಿ ಬೀಳ್ಕೊಡುಗೆ
Head Teacher P. Gangesh Seva Retirement: A Heartwarming Farewell
ಲೋಕದರ್ಶನ ವರದಿ
ಹೂವಿನಹಡಗಲಿ 18: ತಾಲ್ಲೂಕಿನ ಸೋಗಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ, ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕ ಪಿ.ಗಂಗೇಶ್ ಅವರನ್ನು ಶಾಲೆಯ ಶಿಕ್ಷಕ ಬಳಗ ಹಾಗೂ ವಿದ್ಯಾರ್ಥಿಗಳು ಬುಧವಾರ ಹೃದಯಸ್ಪರ್ಶಿಯಾಗಿ ಸನ್ಮಾನಿಸಿ ಬೀಳ್ಕೊಟ್ಟರು.ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಉತ್ತಂಗಿ ಆನಂದ ಮಾತನಾಡಿ, ‘ಶಿಸ್ತು, ಕರ್ತವ್ಯ ನಿಷ್ಠೆ ಮೈಗೂಡಿಸಿಕೊಂಡಿದ್ದ ಗಂಗೇಶ್ ಅವರು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸಿದ್ದಾರೆ. ಅವರ ನಿವೃತ್ತಿಯ ಬದುಕು ಸಂತೋಷದಿಂದ ಕೂಡಿರಲಿ ಎಂದು ಆಶಿಸಿದರು. ಸನ್ಮಾನ ಸ್ವೀಕರಿಸಿದ ಪಿ. ಗಂಗೇಶ್ ಮಾತನಾಡಿ, ಗ್ರಾಮೀಣ ಭಾಗದ ಅಪಾರ ವಿದ್ಯಾರ್ಥಿಗಳಿಗೆ ಬದುಕು ಕಟ್ಟಿಕೊಟ್ಟಿರುವ ಈ ಶಾಲೆ ನೂರು ವಸಂತಗಳನ್ನು ಪೂರೈಸಿದೆ. ಗ್ರಾಮಸ್ಥರು, ಶಿಕ್ಷಣಪ್ರೇಮಿಗಳು ಶಾಲಾ ಶತಮಾನೋತ್ಸವ ಆಚರಿಸಬೇಕು ಎಂದು ತಿಳಿಸಿದರು. ಎಸ್.ಡಿ.ಎಂ.ಸಿ. ಅಧ್ಯಕ್ಷ ಮಲ್ಲಪ್ಪ, ಉಪಾಧ್ಯಕ್ಷೆ ದೀಪಾ, ಮುಖ್ಯ ಶಿಕ್ಷಕಿ ಶಾಂತಮ್ಮ, ವರ್ತಕ ಎಂ.ಎಸ್.ಮಲ್ಲಿನಾಥ, ಯೋಧ ಮಂಜುನಾಥ, ಶಿಕ್ಷಕರಾದ ಬಸವರಾಜ ಹಡಗಲಿ, ಚಿಂತಿ ವಿಶ್ವನಾಥ, ಗುರುಪಾದಪ್ಪ ಇತರರು ಇದ್ದರು. ಮಕ್ಕಳಿಗೆ ಸಿಹಿ ಭೋಜನ ವ್ಯವಸ್ಥೆ ಮಾಡಲಾಗಿತ್ತು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 