ಆರೋಗ್ಯ, ಶಿಕ್ಷಣ ಮತ್ತು ಕೌಶಲ್ಯ ಜೀವನದಲ್ಲಿ ಅತ್ಯಂತ ಮುಖ್ಯ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ

ಆರೋಗ್ಯ, ಶಿಕ್ಷಣ ಮತ್ತು ಕೌಶಲ್ಯ ಜೀವನದಲ್ಲಿ ಅತ್ಯಂತ ಮುಖ್ಯ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ  Health, education, and skills are paramount in life: Deputy Commissioner Dr. Vijayamahantesh Danamma

ಲೋಕದರ್ಶನ ವರದಿ 


ಆರೋಗ್ಯ, ಶಿಕ್ಷಣ ಮತ್ತು ಕೌಶಲ್ಯ ಜೀವನದಲ್ಲಿ ಅತ್ಯಂತ ಮುಖ್ಯ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ  

ಹಾವೇರಿ, ಜು.16: ಜೀವನದಲ್ಲಿ ಆರೋಗ್ಯ, ಶಿಕ್ಷಣ ಹಾಗೂ ಕೌಶಲ್ಯ ಅತ್ಯಂತ ಮುಖ್ಯವಾಗಿದ್ದು, ಕಾಲಮಾನಕ್ಕೆ ತಕ್ಕಂತೆ ಕೌಶಲ್ಯಗಳನ್ನು ಶಿಕ್ಷಣದ ಜೊತೆಗೆ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಹೇಳಿದರು.  

ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಬುಧವಾರ ವಿಶ್ವ ಯುವ ಕೌಶಲ್ಯ ದಿನಾಚರಣೆ ಅಂಗವಾಗಿ ತರಬೇತಿ ಪಡೆದ ಅಭ್ಯರ್ಥಿಗಳು ತಯಾರಿಸಿದ ಬಟ್ಟೆಗಳ ಮೇಲೆ ಚಿತ್ರಕಲೆಯ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.  

ಕೌಶಲ್ಯ ಹೊಂದಿರುವವರು ಹೆಚ್ಚಿನ ಶ್ರಮವಿಲ್ಲದೆ ಉತ್ತಮ ಆದಾಯ ಗಳಿಸಲು ಸಾಧ್ಯವಾಗುತ್ತದೆ. ಆದ್ದರಿಂದ ಜೀವನದಲ್ಲಿ ಕೌಶಲ್ಯದ ಮಹತ್ವವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂದು ಅವರು ತಿಳಿಸಿದರು.  

ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಶ್ರೀಮತಿ ಸೋನಾಲಿ ಕ್ಷೀರಸಾಗರ ಮಾತನಾಡಿ, ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಸೌರ ಪಿವಿ ಆಪರೇಟರ್, ಅಸಿಸ್ಟೆಂಟ್ ಡಿಸೈನರ್, ಅಪಾರಲ್ ಮತ್ತು ಡೇಟಾ ಎಂಟ್ರಿ ಆಪರೇಟರ್ ತರಬೇತಿಗಳನ್ನು ಆರಂಭಿಸಲಾಗುವುದು. ಕಂಪ್ಯೂಟರ್ ತರಬೇತಿಗಳ ಜೊತೆಗೆ ಪಾರಂಪರಿಕ ಹಾಗೂ ಸಾಂಪ್ರದಾಯಿಕ ತರಬೇತಿಗಳಿಗೂ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದರು.  

ಜಿಲ್ಲೆಯಲ್ಲಿ ಸ್ಯಾಂಪ್ಲಿಂಗ್ ಟೈಲರ್ ಹಾಗೂ ಟ್ರೆಡಿಷನಲ್ ಪೇಂಟಿಂಗ್ ್ಕ್ಫ್ಘ್ಲೂಹಿಪ್ಘ್ಲಳ್ತ್ಠಿ್ಲೂ ತರಬೇತಿಗಳು ನಡೆಯುತ್ತಿದ್ದು, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ಮುಖ್ಯಮಂತ್ರಿ ಕೌಶಲ್ಯಕರ ಯೋಜನೆ (ಸಿಎಂಕೆಕೆವೈ) ಅಡಿಯಲ್ಲಿ 60 ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗಿದೆ ಎಂದು ಮಾಹಿತಿ ನೀಡಿದರು.  

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಎಲ್‌., ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಶ್ರೀಮತಿ ಅಮೂಲ್ಯ ಬಮ್ಮಣ್ಣನವರ, ಜಿಲ್ಲಾ ಉದ್ಯೋಗಾಧಿಕಾರಿ ಚೈತನ್ಯಕುಮಾರ್ ಎಸ್‌. ಮೊಹಿತೆ ಸೇರಿದಂತೆ ಇತರರು ಉಪಸ್ಥಿತರಿದ್ದರು. ಅಭಿಯಾನ ವ್ಯವಸ್ಥಾಪಕ ವಿನಾಯಕಬಾಬು ಸ್ವಾಗತಿಸಿದರು.