ಆರೋಗ್ಯ ಇಲಾಖೆ: ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ
Health Department: District Level Coordination Committee Meeting
ಲೋಕದರ್ಶನ ವರದಿ
ಬೆಳಗಾವಿ, ಮಾ.18: ಜಿಲ್ಲಾ ಆರೋಗ್ಯ ಮತ್ತು ಕುಕ ಅಧಿಕಾರಿಗಳ ಸಭಾಂಗಣದಲ್ಲಿ ಬೆಳಗಾವಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಬುಧವಾರ (ಮಾ.18) ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಂತರ ಇಲಾಖೆಗಳ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಸಭೆ ನಡೆಯಿತು.
ಈ ವೇಳೆ ಸಭೆಯಲ್ಲಿ ಮಾತನಾಡಿದ ಜಲ್ಲಾಧಿಕಾರಿ ಮೊಹಮ್ಮದ್ ರೋಷನ್ ಬೆಳಗಾವಿ ನಗರದಾದ್ಯಂತ 50 ಶೈಕ್ಷಣಿಕ ಸಂಸ್ಥೆಗಳು ಹಾಗೂ ಉಳಿದ ತಾಲೂಕುಗಳಲ್ಲಿ 100 ಶೈಕ್ಷಣಿಕ ಸಂಸ್ಥೆಗಳನ್ನು ತಂಬಾಕು ಮುಕ್ತ ಶೈಕ್ಷಣಿಕ ಸಂಸ್ಥೆಗಳೆಂದು ಘೋಷಿಸುವಂತೆ ಕ್ರಮ ನಿರ್ವಹಿಸಲು ಸೂಚಿಸಿದರು.
ತಂಬಾಕು ಉತ್ಪನ್ನ ಮಾರಾಟಾ ಮಾಡುತ್ತಿರುವ ಅಂಗಡಿ ಮಾಲಿಕರು ಕೋಟ್ಪಾ ಕಾಯ್ದೆಯನ್ನು ಮರು ಉಲ್ಲಘಂನೆ ಮಾಡುತ್ತಿದ್ದರೆ ಅಂತವರ ಮೇಲೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳು ಸಭೆಗೆ ನಿರ್ದೇಶನ ನೀಡಿದರು.
ಡಾ. ವಿಶ್ವನಾಥ ಭೋವಿ ಇವರು ಬೆಳಗಾವಿ ಹಾಗೂ ಚಿಕ್ಕೋಡಿ ವಿಭಾಗದಲ್ಲ್ಲಿ ಬರುವ 1588 ಶೈಕ್ಷಣಿಕ ಸಂಸ್ಥೆಗಳನ್ನು ಸರ್ಕಾರದ ಮಾರ್ಗಸೂಚಿಯಂತೆ ತಂಬಾಕು ಮುಕ್ತ ಶೈಕ್ಷಣಿಕ ಸಂಸ್ಥೆಗಳನ್ನಾಗಿ ಘೋಷಿಸಲಾಗಿರುವ ವಿಷಯವನ್ನು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ತಾಲೂಕಾ ಆರೋಗ್ಯಾಧಿಕಾರಿಗಳ ಕಚೇರಿ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಕೋಟ್ಪಾ ಕಾಯ್ದೆ ಸೆಕ್ಷನ್-4, 6(ಎ), 6(ಬಿ) ಮತ್ತು 6(ಸಿ) ಅಡಿಯಲ್ಲಿ ಒಟ್ಟು 64 ಕಾರ್ಯಾಚರಣೆಯನ್ನು ನಗರಾದ್ಯಾಂತ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಿಗೆ ವಿವರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಆಯ್.ಪಿ.ಗಡಾದ, ಜಿಲ್ಲಾ ಆಯುಷ್ ಅಧಿಕಾರಿ ಶ್ರೀಕಾಂತ ಸುಣಧೋಳಿ ಸೇರಿದಂತೆ ಆರೋಗ್ಯ ಇಲಾಖೆಯ ವಿವಿಧ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 