ಬಸರಕೋಡು ಗ್ರಾಮದಲ್ಲಿ ಜ್ವರ ಪ್ರಕರಣಗಳ ಹಿನ್ನೆಲೆ ಆರೋಗ್ಯ ಇಲಾಖೆಯ ಪರೀಶೀಲನೆ
Health Department inspects Basarakodu village following reports of fever cases
ಲೋಕದರ್ಶನ ವರದಿ
ಬಳ್ಳಾರಿ 5: ತಾಲೂಕಿನ ಬಸರಕೋಡು ಗ್ರಾಮದಲ್ಲಿ ಇತ್ತೀಚೆಗೆ ಜ್ವರ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಆರ್. ಅಬ್ದುಲ್ಲಾ ಅವರು ಮಂಗಳವಾರ ಬಸರಕೋಡು ಉಪಕೇಂದ್ರ ಹಾಗೂ ಗ್ರಾಮದ ವಿವಿಧ ಬಡಾವಣೆಗಳಿಗೆ ಭೇಟಿ ನೀಡಿ ಪರೀಶೀಲನೆ ನಡೆಸಿದರು.
ಜ್ವರದಿಂದ ಬಳಲುತ್ತಿರುವ ರೋಗಿಗಳ ಮನೆಗಳಿಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಅವರು, ಗ್ರಾಮಸ್ಥರಿಗೆ ಸ್ವಚ್ಛತೆ ಕಾಪಾಡುವುದು, ಸೊಳ್ಳೆಗಳ ಉತ್ಪತ್ತಿ ತಡೆಯುವುದು ಹಾಗೂ ಆರೋಗ್ಯ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಿದರು.
ಗ್ರಾಮದಾದ್ಯಂತ ತಕ್ಷಣ ಧೂಮೀಕರಣ (ಫಾಗಿಂಗ್) ಕಾರ್ಯ ಕೈಗೊಳ್ಳುವಂತೆ ಆರೋಗ್ಯ ಸಿಬ್ಬಂದಿಗೆ ಸೂಚಿಸಿದ ಅವರು, ಧೂಮೀಕರಣ ನಡೆಯುವ ವೇಳೆ ಸಾರ್ವಜನಿಕರು ಸುರಕ್ಷತೆಯ ದೃಷ್ಟಿಯಿಂದ ಮನೆಯ ಹೊರಗಿರುವಂತೆ ತಿಳಿಸಿದರು.
ಆರೋಗ್ಯ ಇಲಾಖೆಯ ಸಲಹೆಗಳು
ಡೆಂಗ್ಯೂ, ಮಲೇರಿಯಾ ಹಾಗೂ ವೈರಲ್ ಜ್ವರ ತಡೆಗಟ್ಟಲು ಮನೆ ಮತ್ತು ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳುವುದು, ಟೈರ್, ಪ್ಲಾಸ್ಟಿಕ್ ಕಪ್, ಹೂ ಕುಂಡ, ಏರ್ ಕೂಲರ್ ಸೇರಿದಂತೆ ನೀರು ಸಂಗ್ರಹವಾಗುವ ಸ್ಥಳಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸುವುದು, ಸೊಳ್ಳೆ ಪರದೆ ಅಥವಾ ಸೊಳ್ಳೆ ನಿವಾರಕಗಳ ಬಳಕೆ, ದೇಹವನ್ನು ಸಂಪೂರ್ಣ ಮುಚ್ಚುವ ಉಡುಪು ಧರಿಸುವುದು ಅಗತ್ಯ ಎಂದು ತಿಳಿಸಿದರು.
ಆಹಾರ ಸೇವಿಸುವ ಮೊದಲು ಹಾಗೂ ಶೌಚಾಲಯ ಬಳಸಿದ ನಂತರ ಕನಿಷ್ಠ 20 ಸೆಕೆಂಡುಗಳ ಕಾಲ ಸಾಬೂನಿನಿಂದ ಕೈ ತೊಳೆಯುವುದು, ಜ್ವರ ಅಥವಾ ಶೀತ ಇರುವವರಿಂದ ಅಂತರ ಕಾಯ್ದುಕೊಳ್ಳುವುದು, ಜನಸಂದಣಿ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದು, ರಸ್ತೆಬದಿಯ ಅಶುಚಿ ಆಹಾರ ಸೇವನೆ ತಪ್ಪಿಸುವುದು, ಪೌಷ್ಟಿಕ ಆಹಾರ ಸೇವಿಸುವುದು ಹಾಗೂ ದಿನಕ್ಕೆ 8ರಿಂದ 10 ಗ್ಲಾಸ್ ನೀರು ಕುಡಿಯುವುದು ಆರೋಗ್ಯ ರಕ್ಷಣೆಗೆ ಸಹಕಾರಿ ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳು, ಕೀಟಶಾಸ್ತ್ರಜ್ಞರು, ಜಿಲ್ಲಾ ಡಿ.ವಿ.ಬಿ.ಡಿ.ಸಿ.ಪಿ. ಸಿಬ್ಬಂದಿ, ಮೇಲ್ವಿಚಾರಣಾ ತಂಡ, ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿಗಳು, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿ ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 