ಸಂಸದ ಬಸವರಾಜ ಬೊಮ್ಮಾಯಿ ಮನವಿಗೆ ಆರೋಗ್ಯ ಸಚಿವ ಸ್ಪಂದನೆ

Health Minister responds to MP Basavaraj Bommai's request

ಶಿಗ್ಗಾವಿ  28: ಸವಣೂರ ಪಟ್ಟಣದಲ್ಲಿರುವ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯನ್ನು ಸ್ಥಳಾಂತರ ನಿರ್ಧಾರ ಕೈಬಿಟ್ಟು ಆಯುರ್ವೆದಿಕ್ ಮಹಾವಿದ್ಯಾಲಯ ಕಟ್ಟಡಕ್ಕೆ ಅಗತ್ಯ ಅನುದಾನ ನೀಡುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಪತ್ರದ ಮೂಲಕ ಮಾಡಿಕೊಂಡಿರುವ ಮನವಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸ್ಪಂದಿಸಿದ್ದಾರೆ. 

ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶನ ನೀಡಿರುವ ಅವರು, ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯ ಮಂತ್ರಿಗಳು, ಕರ್ನಾಟಕ ಸರ್ಕಾರ ಹಾಗೂ ಲೋಕಸಭಾ ಸದಸ್ಯರು, ಹಾವೇರಿ ಲೋಕಸಭಾ ಕ್ಷೇತ್ರ, ಇವರು ತಮ್ಮ ಪತ್ರದಲ್ಲಿ ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ನಿರ್ಮಿಸಲಾಗುತ್ತಿರುವ ಸರ್ಕಾರಿ ಆಯುರ್ವೇದಿಕ್ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯನ್ನು ಸ್ಥಳಾಂತರಿಸುವ ನಿರ್ಧಾರವನ್ನು ಕೈಬಿಡುವುದರ ಜೊತೆಗೆ ಸದರಿ ಕಟ್ಟಡ ಕಾಮಗಾರಿಗಾಗಿ ಅವಶ್ಯವಿರುವ ಅನುದಾನವನ್ನು ಬಿಡುಗಡೆ ಮಾಡುವಂತೆ ಹಾಗೂ ಇಲ್ಲಿನ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯನ್ನು ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಸ್ಥಳದಲ್ಲಿಯೇ ಮುಂದುವರೆಸಿ, ಸದರಿ ಆಸ್ಪತ್ರೆಗೆ ಹೆಚ್ಚಿನ ಸೌಲಭ್ಯವನ್ನು ಒದಗಿಸುವಂತೆ ಕೋರಿರುವ ಬಗ್ಗೆ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.