ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
Health Resolution Program
ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
ಧಾರವಾಡ, 07 ; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಧಾರವಾಡ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್(ರಿ) ಧಾರವಾಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಡಾಽಽ ಡಿ. ವೀರೆಂದ್ರ ಹೆಗ್ಗಡೆ ಮತ್ತು ಡಾಽಽ ಹೇಮಾವತಿ ವೀ. ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ನಡೆಯುವ ‘ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ’ ದಿನಾಂಕ 7/8/2025ರ ಮಧ್ಯಾಹ್ನ 12.15ಗಂಟೆಗೆ ಜನತಾ ಶಿಕ್ಷಣ ಸಮಿತಿಯ ಶ್ರೀ ಮಂಜುನಾಥೇಶ್ವರ ಪದವಿ ಪೂರ್ವ ಕಲಾ ಮತ್ತು ವಾಣಿಜ್ಯ ಕಾಲೇಜು, ಮೃತ್ಯುಂಜಯ ನಗರ, ಧಾರವಾಡದಲ್ಲಿ ಜರುಗಿತು.
ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರು ಮತ್ತು ಜೆ.ಎಸ್.ಎಸ್.ಐ.ಟಿ.ಐ ನ ಪ್ರಾಚಾರ್ಯರಾದ ಶ್ರೀ ಮಹಾವೀರ ಉಪಾಧ್ಯ ಅವರು ಕಾರ್ಯಕ್ರಮದ ಸಭ್ಯಾಧ್ಯಕ್ಷತೆ ವಹಿಸಿ ಮಾತನಾಡುತ್ತಾ ಪೂಜ್ಯ ಖಾವಂದರ ಸೇವಾ ಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳವಾದರೆ, ಅವರ ಕಾರ್ಯಕ್ಷೇತ್ರ ಧಾರವಾಡವಾಗಿದೆ. ಶಿಕ್ಷಣ ಕ್ರಾಂತಿಯೊಂದಿಗೆ ಗ್ರಾಮೀಣಾಭಿವೃದ್ಧಿಗೆ ಅವರ ಕೊಡುಗೆ ಅಪಾರವಾಗಿದೆ ಎಂದರು. ಧಾರವಾಡ ಜಿಲ್ಲೆಯ ಜಿಲ್ಲಾ ನಿರ್ದೇಶಕರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶ್ರೀಯುತ ಪ್ರದೀಪ ಶೇಟ್ಟಿಯವರು ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳಲ್ಲಿ ದುಶ್ಚಟಗಳ ನಿರ್ಮೂಲನೆ ಬಗೆಗೆ ಜಾಗೃತಿ ಮೂಡಿಸಿದರು.
ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಡಾಽಽ ಉಮೇಶ ಹಳ್ಳಿಕೇರಿ ವೈದ್ಯಾಧಿಕಾರಿಗಳು ಕರ್ನಾಟಕ ಕ್ಯಾನ್ಸರ್ ಆಸ್ಪತ್ರೆ ನವನಗರ ಹುಬ್ಬಳ್ಳಿ ಇವರು ಮಾತನಾಡುತ್ತಾ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಮಹತ್ವ ಮತ್ತು ಮಾದಕ ವಸ್ತುಗಳಿಂದ ದೂರವಿರಲು ಕಿವಿಮಾತು ಹೇಳಿದರು. ಗೌರವ ಉಪಸ್ಥಿತರಾದ ಶ್ರೀ ಮಹಾಂತೇಶ ವೀರಾಪುರ ಚೇರ್ಮನ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ನವನಗರ ಹುಬ್ಬಳ್ಳಿ ಇವರು ರಕ್ತದಾನದ ಮಹತ್ವ ಮತ್ತು ಮಕ್ಕಳ ಆರೋಗ್ಯದ ಕುರಿತು ಮಾತನಾಡಿದರು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾದ ಶ್ರೀಮತಿ ಸವಿತಾ ಅಮರಶೆಟ್ಟಿ ಅವರು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಮತ್ತು ಧಾರ್ಮಿಕವಾಗಿ ಧರ್ಮಸ್ಥಳದ ಪೂಜ್ಯ ಖಾವಂದರ ಕೊಡುಗೆ ಅಪಾರವಾದದು ಎಂದು ಹೇಳಿದರು. ಜೆ.ಎಸ್.ಎಸ್. ಶ್ರೀ ಮಂಜುನಾಥೇಶ್ವರ ಪದವಿ ಪೂರ್ವ ಕಲಾ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯರಾದ ಡಾ.ಬಿ.ಎನ್. ಭಾವಿಯವರು ವಿದ್ಯಾರ್ಥಿಗಳಿಗೆ ‘ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ’ದ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಧಾರವಾಡ ತಾಲೂಕಿನ ಮಾನ್ಯ ಯೋಜನಾಧಿಕಾರಿಗಳು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶ್ರೀ ಅಶೋಕ ಕೆ. ಅವರು ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಯಾದ ಪ್ರಿತಮ್ ಭಾರದ್ವಾಜ್ ಪ್ರಾರ್ಥನಾ ಗೀತೆಯನ್ನು ಹೇಳಿದರು. ಉಪನ್ಯಾಸಕರಾದ ಶ್ರೀ ಶಿವಕುಮಾರ ಟಿ. ವಂದಿಸಿದರು. ಉಪನ್ಯಾಸಕಿಯಾದ ಶ್ರೀಮತಿ ಲೀಲಾವತಿ ಪಾಟೀಲ್ ನಿರೂಪಿಸಿದರು.
ಈ ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ಮತ್ತು 180ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಕ್ರೀಯವಾಗಿ ಪಾಲ್ಗೋಂಡಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 