ಜಿಲ್ಲಾ ಕಾರಾಗೃಹದಲ್ಲಿ ಆರೋಗ್ಯ ಜಾಗೃತಿ
Health awareness in the district jail
ಹಾವೇರಿ 04 : ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮತ್ತು ಹಾವೇರಿ ತಾಲೂಕಾ ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ಕಾರಾಗೃಹ ಸಹಯೋಗದಲ್ಲಿ ಹಾವೇರಿ ಜಿಲ್ಲಾ ಕಾರಾಗೃಹದಲ್ಲಿ ಸೋಮವಾರ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ವಿಚಾರಣಾ ಖೈದಿಗಳಿಗೆ ಆರೋಗ್ಯ ಜಾಗೃತಿ ಕಾರ್ಯಕ್ರಮ ಜರುಗಿತು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಮಾಜ ಕಾರ್ಯಕರ್ತದಾದಾಪೀರ ಹುಲಿಕಟ್ಟಿ ಅವರು, ತಂಬಾಕು ಎಂದರೇನು, ಅದರ ವಿಧಗಳು, ಅದರ ಸೇವನೆಯಿಂದಾಗುವ ಮಾರಣಾಂತಿಕ ಕಾಯಿಲೆಗಳಾದ ಕ್ಯಾನ್ಸರ್, ಗ್ಯಾಂಗ್ರೀನ್, ಸ್ಟೋಕ್ ಹಾಗೂ ಸಾವು ನೋವುಗಳ ಬಗ್ಗೆ ಉಪನ್ಯಾಸ ನೀಡಿದರು.ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಜಿಲ್ಲಾ ಸಲಹೆಗಾರ ಡಾ. ಸಂತೋಷ ದಡ್ಡಿ, ಅವರು ತಂಬಾಕು ಮುಕ್ತ ಯುವ ಅಭಿಯಾನ 3.0ರ ಉದ್ದೇಶ ಹಾಗೂ ಯುವ ಪೀಳಿಗೆಯನ್ನು ತಂಬಾಕು ಉದ್ಯಮದ ಹಸ್ತಕ್ಷೇಪದಿಂದ ರಕ್ಷೀಸುವುದರ ಬಗ್ಗೆ ಮತ್ತು ತಂಬಾಕು ಸೇವನೆಯಿಂದ ಹೊರಗೆ ಬರಲು ಸರ್ಕಾರದಿಂದ ಇರುವ ಚಿಕಿತ್ಸಾ ಕ್ರಮಗಳ ಕುರಿತು ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯಾಗೃಹದ ಜೈಲರ್ ಬಿ.ಯು ಖಿಲಾರಿ, ಎ.ಪಿ ಕಾಂಬ್ಳೆ, ಬಿ.ಎಸ್ ನಾಲ್ಕುರುವಿ, ಎಮ್. ವಾಯ್ ದೊಡ್ಡಮನಿ, ರಮೇಶ ಪಾರ್ವತೆ, ಅಮೃತಗೌಡ ಪಾಟೀಲ, ಮೌನೇಶ ಹೊಸಮನಿ, ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿಗಳು ಇತರರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 