ಆರೋಗ್ಯ ರಕ್ಷಣಾ ಸಿಬ್ಬಂದಿಗಳಿಗೆ 14 ದಿನಗಳ ಕ್ವಾರಂಟೈನ್ ಅಗತ್ಯವಿಲ್ಲ: ಡಿಸಿ

ವಿಜಯಪುರ ಮೇ.17 : ಕೋವಿಡ್-19 ರೋಗಿಗಳ ನಿರ್ವಹಣೆಯಲ್ಲಿ ತೊಡಗಿರುವ ಆರೋಗ್ಯ ರಕ್ಷಣಾ ಕಾರ್ಯಕರ್ತರಿಗೆ 14 ದಿನಗಳ ಸಾಂಸ್ಥಿಕ (ಇನ್ಸಿಟ್ಯೂಷನಲ್) ಕ್ವಾರಂಟೈನ್ ಅವಶ್ಯಕತೆಯಿಲ್ಲ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಿಳಿಸಿದ್ದಾರೆ.

 ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಕೋವಿಡ್-19 ನಿಯಂತ್ರಣ ಕುರಿತಂತೆ ಸಭೆ ನಡೆಸಿದ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದಶರ್ಿಗಳು ಹೊರಡಿಸಿರುವ ಸುತ್ತೋಲೆಯಂತೆ ಕೋವಿಡ್-19 ರೋಗಿಗಳ ನಿರ್ವಹಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯಾಧಿಕಾರಿಗಳು ಕಿರಿಯ ಮತ್ತು ಹಿರಿಯ ಆರೋಗ್ಯ ಸಹಾಯಕರು, ಶುಶ್ರೂಷಕಿಯರು, ಪ್ರಯೋಗಶಾಲಾ ತಂತ್ರಜ್ಞರು, ಗ್ರೂಪ್ ಡಿ ನೌಕರರು 14 ದಿನಗಳ ಕ್ವಾರಂಟೈನ್ಗೆ ಒಳಪಡಿಸುವುದು ಅವಶ್ಯಕತೆಯಿಲ್ಲ ಎಂದು ಹೇಳಿರುವ ಅವರು ಪಿಪಿಇ ಕಿಟ್, ಅವಶ್ಯಕ ಸುರಕ್ಷತಾ ಸಲಕರಣೆಗಳೊಂದಿಗೆ ಕಾರ್ಯನಿರ್ವಹಿಸುವ ಹಿನ್ನೆಲೆಯಲ್ಲಿ ಅಪಾಯ ಕಡಿಮೆ ಇರುವುದರಿಂದ 14 ದಿನಗಳ ಕ್ವಾರಂಟೈನ್ ಅಗತ್ಯವಿಲ್ಲ ಎಂದು ಸಂಬಂಧಪಟ್ಟ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. 

 ಕೋವಿಡ್-19 ರೋಗಿಗಳ ಚಿಕಿತ್ಸೆಯಲ್ಲಿ ತೊಡಗಿರುವವರು ಲಕ್ಷಣವಿಲ್ಲದ ಸಂದರ್ಭದಲ್ಲಿ ಸಾಂಸ್ಥಿಕ (ಇನ್ಸಿಟ್ಯೂಷನಲ್) ಕ್ವಾರಂಟೈನ್ ಮಾಡುವುದು ಸಮಂಜಸವಲ್ಲ. ಇಂತಹ ಆರೋಗ್ಯ ರಕ್ಷಣಾ ಕಾರ್ಯಕರ್ತರು ಪ್ರತಿದಿನ ತಮ್ಮ ಟೇಂಪ್ರೇಚರ್ ಮತ್ತು ಲಕ್ಷಣವಿಲ್ಲದ ಕುರಿತಂತೆ ವರದಿ ಮಾಡಿ, ಕೋವಿಡ್-19 ಆಸ್ಪತ್ರೆಯಲ್ಲಿ ಎಂದಿನಂತೆ ತಮ್ಮ ಕರ್ತವ್ಯವನ್ನು ಸಲ್ಲಿಸಬಹುದಾಗಿದೆ. ಅದರಂತೆ ಕೋವಿಡ್ವಲ್ಲದ ಆಸ್ಪತ್ರೆಗಳಲ್ಲೂ ಸಕರ್ಾರದ ಹೊಸ ಮಾರ್ಗಸೂಚಿಯನ್ವಯ ಕಾರ್ಯನಿರ್ವಹಿಸುವಂತೆ ಅವರು ತಿಳಿಸಿದ್ದಾರೆ.

 ಸಂಬಂಧಪಟ್ಟ ವೈದ್ಯಾಧಿಕಾರಿಗಳು ಮತ್ತು ವೈದ್ಯ ಸಿಬ್ಬಂದಿಗಳು ಯೋಜನಾ ಬದ್ಧವಾಗಿ ಕಾರ್ಯನಿರ್ವಹಿಸಬೇಕು. ಈವರೆಗೆ ಜಿಲ್ಲೆಯಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿಗಳು ಮುಂದೆಯೂ ಯಾವುದೇ ಲೋಪಕ್ಕೆ ಮತ್ತು ದೂರುಗಳಿಗೆ ಅವಕಾಶ ನೀಡದೆ ಪ್ರಾಮಾಣಿಕ ಮತ್ತು ಜವಾಬ್ದಾರಿಯಿಂದ ತಮ್ಮ ಕರ್ತವ್ಯವನ್ನು ನಿಭಾಯಿಸುವಂತೆ ಅವರು ಸೂಚನೆ ನೀಡಿದರು.

 ಜಿಲ್ಲೆಯಲ್ಲಿ ಮೇ.16ರಂದು ನಾಲ್ಕು ವರ್ಷದ ಹೆಣ್ಣು ಮಗುವಿಗೆ ಕೊರೋನಾ ಸೋಂಕು ತಗುಲಿದ್ದು, ಈ ರೋಗಿ ಸಂಖ್ಯೆ 109ಗೆ ರೋಗಿ ಸಂಖ್ಯೆ 594ರ ಸಂಪರ್ಕದಿಂದ ಕೋವಿಡ್-19 ಸೋಂಕು ತಗುಲಿರುವ ಬಗ್ಗೆ ದೃಢಪಟ್ಟಿದೆ. ಅದರಂತೆ ಇಂದು ಕೂಡ ಒಬ್ಬರಿಗೆ ಕೋವಿಡ್-19 ಸೋಂಕು ತಗುಲಿದ್ದು, 35 ವರ್ಷದ ಮಹಿಳೆ ರೋಗಿ ಸಂಖ್ಯೆ 1122 ಇವರಿಗೆ ರೋಗಿ ಸಂಖ್ಯೆ 577 ಇವರ ಸಂಪರ್ಕದಿಂದ ಸೋಂಕು ತಗುಲಿರುವ ಬಗ್ಗೆ ದೃಢಪಟ್ಟಿದೆ. ಈವರೆಗೆ ಒಟ್ಟು 54 ಕೋವಿಡ್-19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, 14 ರೋಗಿಗಳು ಸಕ್ರಿಯ ರೋಗಿಗಳಾಗಿದ್ದಾರೆ. ಈಗಾಗಲೇ 37 ರೋಗಿಗಳು ಜಿಲ್ಲಾಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

    ಜಿಲ್ಲೆಗೆ ವಿವಿಧ ರಾಜ್ಯಗಳಿಂದ 10097 ವಲಸೆ ಕಾಮರ್ಿಕರು ಆಗಮಿಸಿದ್ದು, ಸಾಂಸ್ಥಿಕ (ಇನ್ಸಿಟ್ಯೂಷನಲ್) ಕ್ವಾರಂಟೈನ್ಗೆ ಕ್ರಮ ಕೈಗೊಳ್ಳಲಾಗಿದೆ. ಗೋವಾದಿಂದ 2886 ವಲಸೆ ಕಾಮರ್ಿಕರು ಬಂದ ಬಗ್ಗೆ ವರದಿಯಾಗಿದೆ ಎಂದು ತಿಳಿಸಿದ ಅವರು ಈವರೆಗೆ 2741 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದ್ದು, 2608 ನೆಗೆಟಿವ್ ವರದಿ ಬಂದಿದೆ. ಇನ್ನೂ 80 ಜನರ ವರದಿ  ಬರಬೇಕಾಗಿದೆ ಎಂದು ಅವರು ತಿಳಿಸಿದರು.

    ಅದರಂತೆ ವಿದೇಶ ಮತ್ತು ಇತರೆ ಪ್ರದೇಶಗಳಿಂದ ಬಂದ 2292 ಜನರ ಮೇಲೆ ತೀವ್ರ ನಿಗಾ ಇಡಲಾಗಿದೆ. 28 ದಿನಗಳ ಐಸೋಲೇಶನ್ ಅವಧಿಯನ್ನು 1269 ಜನರು ಪೂರ್ಣಗೊಳಿಸಿದ್ದಾರೆ. 983 ಜನರು 1 ರಿಂದ 28 ದಿನಗಳ ರೀಪೋಟರ್ಿಂಗ್ ಅವಧಿಯಲ್ಲಿದ್ದಾರೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.

 ಇಂದಿನ ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ್, ಜಿಲ್ಲಾಸ್ಪತ್ರೆ ಸರ್ಜನ್ ಶ್ರೀ ಶರಣಪ್ಪ ಕಟ್ಟಿ, ಡಾ.ಲಕ್ಕಣ್ಣನವರ, ಜಿಲ್ಲಾ ಸವರ್ೇಕ್ಷಣಾಧಿಕಾರಿ ಡಾ.ಎಂ.ಬಿ ಬಿರಾದಾರ, ಡಾ.ಮುಕುಂದ ಗಲಗಲಿ, ಡಾ.ಧಾರವಾಡಕರ ಸೇರಿದಂತೆ ಇತರರು ಉಪಸ್ಥಿತರಿದ್ದರು.