ಮಹಿಳೆಯರಿಗೆ ಆರೋಗ್ಯ ತಪಾಸಣೆ ಶಿಬಿರ
Health check up camp for women
ಯರಗಟ್ಟಿ 21: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸಮಗ್ರ ಗ್ರಾಮೀಣ ಅಭಿವೃದ್ಧಿಗೆ ನಾನಾ ಯೋಜನೆಗಳನ್ನು ಕೈಗೊಂಡಿದ್ದು ಸತ್ತಿಗೇರಿ ವಲಯದ ಎಂ. ಟಿ ನರಗುಂದ ಪ್ರೌಢ ಶಾಲೆಗಳ ವಿದ್ಯಾರ್ಥಿಗಳಿಗೆ ಟ್ಯೂಷನ್ ಸಹ ನೀಡುತ್ತಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಜಿಲ್ಲಾ ನಿರ್ದೇಶಕರರಾದ ಎಚ್. ಆರ್. ಲವಕುಮಾರ ಹೇಳಿದರು.ಸಮೀಪದ ತೋರಣಗಟ್ಟಿ ಗ್ರಾಮದ ಎಂ. ಟಿ. ನರಗುಂದ ಪ್ರೌಢಶಾಲೆಯಲ್ಲಿ ಟ್ಯೂಷನ್ ಕ್ಲಾಸ್ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿ, ಸಮಾಜದ ಹಿತದೃಷ್ಟಿಯಲ್ಲಿ ಮಹಿಳೆಯರಿಗೆ ತರಬೇತಿ ಆರೋಗ್ಯ ತಪಾಸಣೆ ಶಿಬಿರ, ಪ್ರಾಣಿಗಳು ಹಾಗೂ ಪಕ್ಷಿಗಳಿಗೆ ಬೇಸಿಗೆಯಲ್ಲಿ ಕುಡಿಯುವ ನೀರಿಗಾಗಿ ಕೆರೆ ನಿರ್ಮಾಣ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ, ಮಾಸಾಶನ, ವಾತ್ಸಲ್ಯ ಕಾರ್ಯಕ್ರಮದಲ್ಲಿ ನಿರ್ಗತಿಕರಿಗೆ ಮನೆ ನಿರ್ಮಾಣ ಮುಂತಾದ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ.
ವಿದ್ಯಾರ್ಥಿಗಳು ಉತ್ತಮ ಅಂಕಗಳಿಸಲು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ನಡೆಸಲಾಗುತ್ತಿದೆ ಎಂದು ಹೇಳಿದರು.ಶಾಲೆಯ ಪ್ರಧಾನ ಗುಂರುಗಳಾದ ಕೆ. ಡಿ. ಅಚನೂರ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಕ್ಕಳಿಗೆ ಟ್ಯೂಷನ್ ಕೊಡುತ್ತಿರುವುದರಿಂದ ಮಕ್ಕಳಿಗೆ ಕಲಿಕೆ ಮಟ್ಟ ಸುಧಾರಿಸಿ ಹೆಚ್ಚಿನ ಫಲಿತಾಂಶ ಬರಲು ಸಾಧ್ಯವಾಗಿದೆ ಎಂದು ಕೃತಜ್ಞತೆ ವ್ಯಕ್ತಪಡಿಸಿದರು.ನಂತರ ಮಕ್ಕಳಿಗೆ ಪುಸ್ತಕ ಮತ್ತು ಪೆನ್ ನೀಡಲಾಯಿತು. ಶಾಲೆಯ ಸಹಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.ಈ ವೇಳೆ ತಾಲೂಕು ಯೋಜನಾಧಿಕಾರಿ ಶ್ರೀಕಾಂತ ಎಮ್, ಡಿ. ಕೆ. ದಂಡಿನ, ಟಿ. ಎಂ. ಸತ್ತಿಗೇರಿ, ಆರ್. ಎಂ. ಮುಂಗುಜೆ, ಮಂಜುನಾಥ ಕೋರಿಶೆಟ್ಟಿ, ಎಸ್.ಎಸ್. ಸಿಂಗಾರಗೋಪ್ಪ, ಎಂ. ಎಂ. ಕಾಂತಿಮಠ, ರಮೇಶ ಉಪ್ಪಾರ, ಜ್ಞಾನವಿಕಾಸ ಸಮನ್ವಯಾಧಿಕಾರಿ ನಿಶಾ ನಾಯ್ಕ, ಸೇವಾ ಪ್ರತಿನಿಧಿ ಹನುಮವ್ವ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್ 