ನರೇಗಾ ಕೂಲಿಕಾರರಿಗೆ ಆರೋಗ್ಯ ತಪಾಸಣೆ
Health check-up for NREGA workers
ಕಾರವಾರ, ಜ.6: ದುಡಿಮೆಯ ಭರದಲ್ಲಿ ಕೂಲಿಕಾರರು ಆರೋಗ್ಯದ ಕಡೆ ನಿರ್ಲಕ್ಷವಹಿಸಬಾರದು ಎಂಬ ದೃಷ್ಟಿಯಿಂದ ನರೇಗಾ ಯೋಜನೆಯಡಿ ಕೆಲಸ ಮಾಡುವ ಕೂಲಿಕಾರರಿಗೆ ಆರೋಗ್ಯ ತಪಾಸಣೆ ಶಿಬಿರ ಏರಿ್ಡಸಿ ಸಾಮಾನ್ಯ ಆರೋಗ್ಯ ತಪಾಸಣೆ ಮಾಡಿಸಲಾಯಿತು.ಹೊನ್ನಾವರ ತಾಲೂಕಿನ ಮಾವಿನಕುರ್ವಾ ಗ್ರಾಮ ಪಂಚಾಯತ್ ನಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಕಾಲುವೆ ಕಾಮಗಾರಿ ದುರಸ್ಥಿ ಮಾಡಲಾಗುತ್ತಿದ್ದು, ಮಂಗಳವಾರ ಕೆಲಸದ ಸ್ಥಳದಲ್ಲಿ ಕೂಲಿಕಾರರಿಗೆ ಆರೋಗ್ಯ ತಪಾಸಣೆ ಕೈಗೊಂಡು ಬಿಪಿ, ಶುಗರ್, ನೆಗಡಿ, ಕೆಮ್ಮು, ಜ್ವರ ಇತ್ಯಾದಿ ಸಾಮಾನ್ಯ ಪರೀಕ್ಷೆಗಳನ್ನು ಮಾಡಿ ಆರೋಗ್ಯ ಜಾಗೃತಿ ಕುರಿತು ಮಾಹಿತಿ ನೀಡಲಾಯಿತು.
ಈ ವೇಳೆ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಕಿರಣ್ ಕುಮಾರ್ ಮಾತನಾಡಿ, ಕೂಲಿಕಾರರ ಆರೋಗ್ಯದ ಹಿತದೃಷ್ಟಿಯಿಂದ ಕೈಗೊಳ್ಳಲಾದ ಆರೋಗ್ಯ ಶಿಬಿರದ ಸದುಪಯೋಗವನ್ನು ಎಲ್ಲಾ ಕೂಲಿಕಾರರು ಪಡೆಯಬೇಕು. ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ನಿಮ್ಮ ಸುತ್ತಲಿನ ವಾತಾವರಣವನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ಹಾಗೂ ನರೇಗಾದಡಿ ಸಿಗುವ ಸೌಲಭ್ಯಗಳು ಹಾಗೂ ಅನುಕೂಲತೆ ಬಗ್ಗೆ ತಿಳಿಸಿದ ಅವರು, ವೈಯಕ್ತಿಕ ಕಾಮಗಾರಿಯನ್ನು ಪಡೆಯಲು ಇಚ್ಚಿಸುವವರು ಇಂದೇ ಹೆಸರನ್ನು ನೀಡಬಹುದು. ಮಹಿಳೆಯರ ಭಾಗವಹಿಸುವಿಕೆ ಉತ್ತಮವಾಗಿದೆ ಮುಂದಿನ ದಿನಗಳಲ್ಲಿ ಈ ಗ್ರಾಮದ ಅಭಿವೃದ್ಧಿ ಕಾಮಗಾರಿಗಳು ಇನ್ನೂ ಹೆಚ್ಚಿನ ಮಟ್ಟದಲ್ಲಿ ಸಾಗಲಿ ಎಂದರು.ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಧರ್ ಪಟಗಾರ್, ತಾಂತ್ರಿಕ ಸಂಯೋಜಕ ಸುನೀಲ್, ಐಇಸಿ ಸಂಯೋಜಕಿ ಪೂರ್ಣಿಮಾ ಗೌಡ, ಪಂಚಾಯತ್ ಸಿಬ್ಬಂದಿಗಳು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 