ಮತದಾರರ ಪಟ್ಟಿಯಲ್ಲಿಲ್ಲದವರದ್ದೂ ಆರೋಗ್ಯ ವಿವರ ಸಂಗ್ರಹ ಕಡ್ಡಾಯ; ಬಿಬಿಎಂಪಿ ಆಯುಕ್ತ

ಬೆಂಗಳೂರು, ಮೇ 13,ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದವರ ಆರೋಗ್ಯ ಮಾಹಿತಿ ಕಲೆ ಹಾಕುತ್ತಿಲ್ಲ ಎಂಬ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ, ಪ್ರತಿಯೊಬ್ಬರ ಆರೋಗ್ಯ ವಿವರ ಪಡೆಯಬೇಕು ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್‌.ಅನಿಲ್‌ ಕುಮಾರ್‌ ಆದೇಶ ಹೊರಡಿಸಿದ್ದಾರೆ. ಮತದಾರರ ಪಟ್ಟಿಯಲ್ಲಿರುವ ಮಾಹಿತಿ ಆಧಾರದಲ್ಲಿ ಆರೋಗ್ಯ ಸಮೀಕ್ಷೆ ನಡೆಸಲಾಗುತ್ತಿತ್ತು. ನಗರದಲ್ಲಿ ನೆಲೆಸಿರುವ ಅನೇಕರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಲ್ಲ. ಆದ್ದರಿಂದ ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದವರನ್ನೂ ಆರೋಗ್ಯ ಸಮೀಕ್ಷೆಗೆ ಒಳಪಡಿಸಬೇಕು. ಅವರಿಂದಲೂ ಮಾಹಿತಿ ಪಡೆಯಬೇಕು ಎಂದು ಸಮೀಕ್ಷಕರಿಗೆ ನಿರ್ದೇಶನ ನೀಡಿದ್ದೇವೆ ಎಂದಿದ್ದಾರೆ.