ವಾಯು ಮಾಲಿನ್ಯದಿಂದ ಆರೋಗ್ಯದ ಮೇಲೆ ದುಷ್ಪರಿಣಾಮ:ಡಾ.ದೊಡ್ಡಗೌಡರ
ಹಾವೇರಿ10: ಇಂದು ಅಧಿಕ ವಾಹನಗಳ ಓಡಾಟದಿಂದ ವಾಯುಮಾಲಿನ್ಯ ಉಂಟಾಗುತ್ತಿದ್ದು, ಇದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಶ್ರೀ ಸಿಂದಗಿ ಶಾಂತವಿರೇಶ್ವರ ಆಯುವರ್ೇದಿಕ್ ಮಹಾವಿದ್ಯಾಲಯದ ವೈದ್ಯ ಡಾ.ಸಂಗಮೇಶ ಎನ್. ದೊಡ್ಡಗೌಡರ ಅವರು ಹೇಳಿದರು.
ಇತ್ತೀಚೆಗೆ ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ವತಿಯಿಂದ ಆಯೋಜಿಸಲಾದ ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಅಧಿಕ ಆಮ್ಲಜನಕವನ್ನು ಉತ್ಪತ್ತಿ ಮಾಡುವ ತುಳಿಸಿ, ಶುಂಠಿ, ಅರಿಷಿಣ ಬೆಳೆಸುವ ಮೂಲಕ ವಾಯು ಮಾಲಿನ್ಯ ತಡೆಯಬಹುದು. ಸಾರ್ವಜನಿಕರು ವಾರಕ್ಕೆ ಒಂದು ದಿನ ತಮ್ಮ ವಾಹನಗಳಿಗ ರಜೆ ನೀಡುವ ಮೂಲಕ ವಾಯು ಮಾಲಿನ್ಯ ತಡೆಗಟ್ಟಲು ಮುಂದಾಗಬೇಕು ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾದೇಶಿಕ ಸಾರಿಗೆ ಅಧಿಕಾರಿ ದೀಪಕ ಅವರು ಮಾತನಾಡಿ, ವಾಯು ಮಾಲಿನ್ಯದಿಂದ ಮನುಷ್ಯರ ಹಾಮರ್ೋನಗಳ ಅಸಮತೋಲನ ಉಂಟಾಗಿ ಹಲವಾರು ಕಾಯಿಲೆಗಳು ಬರುವ ಸಾಧ್ಯತೆ ಇದೆ. ಸಾರ್ವಜನಿಕರು ಗಿಡ ಮರಗಳನ್ನು ಹೆಚ್ಚಾಗಿ ಬೆಳೆಸಬೇಕು ಈ ಮಾಸಾಚರಣೆಯು ಕೇವಲ ನವಂಬರ್ ಮಾಹೆಗೆ ಮಾತ್ರ ಸೀಮಿತವಾಗದೇ ವರ್ಷಪೂತರ್ಿ ಎಲ್ಲರೂ ಜಾಗೃತರಾಗಿ ವಾಯು ಮಾಲಿನ್ಯ ತಡೆಗಟ್ಟಲು ಸಹಕರಿಸಬೇಕು ಎಂದು ಹೇಳಿದರು.
ಮೋಟಾರು ವಾಹನ ನಿರೀಕ್ಷಕ ಪ್ರಭುಸ್ವಾಮಿ ಹಿರೇಮಠ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸಾರ್ವಜನಿಕರು ತಮ್ಮ ವಾಹನಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು ಹಾಗೂ ಕಾಲಕಾಲಕ್ಕೆ ವಾಹನಗಳ ವಾಯು ಮಾಲಿನ್ಯವನ್ನು ತಪಾಸಣೆ ಕೇಂದ್ರಗಳಲ್ಲಿ ಪರೀಕ್ಷಿಸಿಕೊಂಡು ಪ್ರಮಾಣಪತ್ರಗಳನ್ನು ನಿಯಮಿತವಾಗಿ ಪಡೆದುಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಲಯನ್ಸ್ ಪ್ರೌಢಶಾಲೆ ಶಿಕ್ಷಕ ಎಂ.ಎನ್.ದೇಶಪಾಂಡೆ, ವಿ.ವಿ.ನಾಯಕ, ಕಚೇರಿ ಅಧೀಕ್ಷಕ ಚಂದ್ರಶೇಖರ ಕವಲಿ, ಶ್ರೀಪಾದ ಬ್ಯಾಳಿ, ಮೆಹಬೂಬಲಿ ಹೋಟೆಗಾಳಿ ಇತರರು ಉಪಸ್ಥಿತರಿದ್ದರು. ವಿ.ಜಿ.ನಾಯಿಕ ಅವರು ಕಾರ್ಯಕ್ರಮ ನಿರೂಪಿಸಿದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 