ವಿಕಲಚೇತನರಿಗೆ ಆರೋಗ್ಯವೇ ಅಮೂಲ್ಯ ಸಂಪತ್ತು: ವಿನಯಕುಮಾರ ಹೊಳಯಪ್ಪಗೋಳ
Health is an invaluable asset for the differently-abled: Vinayakumar Holayappagola
ಬ್ಯಾಡಗಿ 01: ವಿಕಲಚೇತನರು ತಮ್ಮ ಆರೋಗ್ಯದ ಬಗ್ಗೆ ನಿರಂತರ ಕಾಳಜಿ ವಹಿಸಬೇಕು. ನಿಯಮಿತ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದರೊಂದಿಗೆ ಸರ್ಕಾರದ ವಿವಿಧ ಆರೋಗ್ಯ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ವಿನಯಕುಮಾರ ಹೊಳಯಪ್ಪಗೋಳ ಕರೆ ನೀಡಿದರು.
ಅಗಸನಹಳ್ಳಿ ಗ್ರಾಮದ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಹಾವೇರಿ ಹಾಗೂ ಪುರಸಭೆ ಬ್ಯಾಡಗಿ ಇವರ ಸಂಯುಕ್ತಾಶ್ರಯದಲ್ಲಿ ವಿಕಲಚೇತನರಿಗಾಗಿ ಆಯೋಜಿಸಿದ್ದ ಸಮಗ್ರ ಆರೋಗ್ಯ ತಪಾಸಣೆ ಮತ್ತು ಆರೋಗ್ಯ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿಕಲಚೇತನರ ಸಮಗ್ರ ಅಭಿವೃದ್ಧಿಗೆ ಆರೋಗ್ಯ ಅತ್ಯಂತ ಪ್ರಮುಖವಾಗಿದ್ದು, ಆರಂಭಿಕ ಹಂತದಲ್ಲಿಯೇ ಆರೋಗ್ಯ ಸಮಸ್ಯೆಗಳನ್ನು ಗುರುತಿಸಿದರೆ ಸೂಕ್ತ ಚಿಕಿತ್ಸೆ ಪಡೆದು ಉತ್ತಮ ಜೀವನ ನಡೆಸಲು ಸಾಧ್ಯವಾಗುತ್ತದೆ.
ಸರ್ಕಾರ ವಿಕಲಚೇತನರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ಅವುಗಳ ಬಗ್ಗೆ ಪ್ರತಿಯೊಬ್ಬರೂ ಅರಿವು ಹೊಂದಬೇಕು. ಆರೋಗ್ಯ ಇಲಾಖೆ ಹಾಗೂ ಸಂಬಂಧಿತ ಇಲಾಖೆಗಳು ಆಯೋಜಿಸುವ ಉಚಿತ ಆರೋಗ್ಯ ತಪಾಸಣಾ ಶಿಬಿರಗಳಲ್ಲಿ ಭಾಗವಹಿಸಿ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಸಲಹೆ ನೀಡಿದರು. ವೀಕಲಚೆತನರ ತಾಲೂಕು ಅಧ್ಯಕ್ಷ ಪಾಂಡುರಂಗ ಸುತಾರ ಮಾತನಾಡಿ ವಿಕಲಚೇತನರು ಸಮಾಜದ ಮುಖ್ಯವಾಹಿನಿಯಲ್ಲಿ ಗೌರವಯುತ ಜೀವನ ನಡೆಸಲು ಉತ್ತಮ ಆರೋಗ್ಯ ಅತ್ಯಗತ್ಯ.
ಇಂತಹ ಆರೋಗ್ಯ ತಪಾಸಣಾ ಶಿಬಿರಗಳ ಮೂಲಕ ರೋಗಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಇಂತಹ ಕಾರ್ಯಕ್ರಮಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಒಟ್ಟು 40 ರಿಂದ 50 ಹೆಚ್ಚು ವೀಕಲಚೆತನರು ಶಿಬಿರದಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.ಈ ಸಂದರ್ಭದಲ್ಲಿ ಶಾಲೆಯ ಖಆಒಅ ಅಧ್ಯಕ್ಷರು ಅಕ್ಬರ್ ಓಲೇಕಾರ. ಪ್ರಧಾನ ಗುರುಗಳು ಬಡಪ್ಪನವರ.
ತಾಲೂಕ ವಿಕಲಚೇತನರ ಸಂಘದ ಅಧ್ಯಕ್ಷ ಪಾಂಡುರಂಗ ಸುತಾರ. ಜಿಲ್ಲಾ ಪುನರ್ವಸತಿ ಕೇಂದ್ರದ ನೋಡಲಾಧಿಕಾರಿಗಳು ಪೂರ್ಣಿಮಾ ಮಠ ಹಾಗೂ ಫಿಜಿಯೋಥೆರಪಿಸ್ಟ್ ವೈದ್ಯಾಧಿಕಾರಿಗಳಾದ ಅಂಕಿತ್ ಆನಂದ್ ವಿದ್ಯಾ ಶೆಟ್ಟಿ.
ಸ್ಕಾಯ್ ಆರ್ಗನೈಸೇಶನ್. ಬ್ಯಾಡಗಿ ನಾಗರಾಜ್ ಅಗಸನಹಳ್ಳಿ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ತಾಲೂಕು ಪಂಚಾಯತ್ ಬ್ಯಾಡಗಿ ಹಾಗೂ ನಗರ ಪುರಸತಿ ಕಾರ್ಯಕರ್ತರು ಯು ಆರ್ ಡಬ್ಲ್ಯೂ ನೂರ್ ಜಾನ್ ಕಲಕೋಟಿ ಮತ್ತು ಹಾಜರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 