ಆರೋಗ್ಯವೇ ಜೀವನದ ನಿಜವಾದ ಸಂಪತ್ತು: ಶಾಸಕ ಬಸವರಾಜ ಶಿವಣ್ಣನವರ
Health is the true wealth of life: MLA Basavaraja Shivannanavara
ಬ್ಯಾಡಗಿ 11: ಆರೋಗ್ಯವೇ ಜೀವನದ ನಿಜವಾದ ಸಂಪತ್ತು. ಆರೋಗ್ಯವಂತ ಸಮಾಜವೇ ಅಭಿವೃದ್ಧಿ ಹೊಂದಿದ ಸಮಾಜವಾಗುತ್ತದೆ. ಎಂದು ಶಾಸಕ ಬಸವರಾಜ ಶಿವಣ್ಣನವರ ಅಭಿಪ್ರಾಯಪಟ್ಟರು. ತಾಲೂಕಿನ ಗ್ರಾಮಗಳ ಅಭಿವೃದ್ಧಿಯ ದೃಷ್ಟಿಯಿಂದ ಹಿರೇ ಅಣಜಿ ಗ್ರಾಮದಲ್ಲಿ 65 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಆಯುಷ್ಮಾನ ಆರೋಗ್ಯ ಕೇಂದ್ರದ ಶಿಲಾನ್ಯಾಸ ಸಮಾರಂಭದ ಕಾಮಗಾರಿಗೆ ಭೂಮಿ ಪೂಜೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದವರು ಈ ಆರೋಗ್ಯ ಕೇಂದ್ರ ನಿರ್ಮಾಣವಾದ ನಂತರ ಗ್ರಾಮಸ್ಥರಿಗೆ ಗುಣಮಟ್ಟದ ಪ್ರಾಥಮಿಕ ಆರೋಗ್ಯ ಸೇವೆಗಳು, ತಾಯಿ-ಮಕ್ಕಳ ಆರೈಕೆ, ಲಸಿಕಾ ಕಾರ್ಯಕ್ರಮ, ರಕ್ತದೊತ್ತಡ ಮತ್ತು ಮಧುಮೇಹ
ತಪಾಸಣೆ ಸೇರಿದಂತೆ ಅನೇಕ ಆರೋಗ್ಯ ಸೇವೆಗಳು ಸ್ಥಳೀಯವಾಗಿಯೇ ಲಭ್ಯವಾಗಲಿವೆ. ಇದರಿಂದ ಜನರು ಸಣ್ಣಪುಟ್ಟ ಚಿಕಿತ್ಸೆಗಳಿಗಾಗಿ ದೂರದ ಆಸ್ಪತ್ರೆಗೆ ತೆರಳುವ ಅಗತ್ಯ ಕಡಿಮೆಯಾಗುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಆರೋಗ್ಯವನ್ನು ಕಾಪಾಡಲು ಹಲವು ಮಹತ್ವದ ಯೋಜನೆಗಳನ್ನು ಜಾರಿಗೊಳಿಸುತ್ತಿವೆ. ಅವುಗಳ ಸದುಪಯೋಗವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು. ಆರೋಗ್ಯ ಕೇಂದ್ರವನ್ನು ಸ್ವಚ್ಛವಾಗಿ ಕಾಪಾಡುವುದು ಹಾಗೂ ಆರೋಗ್ಯ ಸಿಬ್ಬಂದಿಯೊಂದಿಗೆ ಸಹಕರಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ.
ಇತ್ತೀಚಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಜನಸಾಮಾನ್ಯರ ಸೇವೆ ಸಲ್ಲಿಸಲು ವೈದ್ಯಾಧಿಕಾರಿಗಳ ಮಾನವೀಯತೆ ಯಿಂದ ನಡೆದುಕೊಳ್ಳಬೇಕು. ಈ ಕಾಮಗಾರಿ ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳಲಿ ಎಂದು ಸಂಬಂಧಿಸಿದ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚಿಸಿದರು. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ತಾಲೂಕ ಅಧ್ಯಕ್ಷ ದಾನಪ್ಪ ಚೂರಿ.ಶಿವನಗೌಡ ಪಾಟೀಲ. ಗ್ಯಾರಂಟಿ ಅಧ್ಯಕ್ಷ ಶಂಬನಗೌಡ ಪಾಟೀಲ್ ಮಂಜನ ಗೌಡ ಪಾಟೀಲ್ ಸುರೇಶ್ ಗೌಡ ಪಾಟೀಲ್. ಅಬ್ದುಲ್ ಮುನಾಫ್ ಎಲಿಗಾರ್. ನ್ಯಾಯವಾದಿ ಗೌರಾಪುರ. ಬಸವರಾಜ್ ಕೋಣನವರ್ ಸೇರಿದಂತೆ ಗ್ರಾಮದ ಎಲ್ಲ ಮುಖಂಡರು ಹಿರಿಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಗುತ್ತಿಗೆದಾರರು ಉಪಸ್ಥಿತರಿದ್ದರು.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 