ಚಿಕ್ಕ ಮಕ್ಕಳ ಆರೋಗ್ಯ ಸೂಕ್ಷ್ಮ: ಸೋನಾಲಿ ಬಿಜ್ಜರಗಿ
Health of young children is sensitive: Sonali Bijjargi
ಬೆಳಗಾವಿ 11: ಕೆಎಲ್‌ಇ ವೇಣುಧ್ವನಿ 90.4 ಎಫ್. ಎಮ್. ಬೆಳಗಾವಿ, ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಬೆಳಗಾವಿ ಹಾಗೂ ಕೆಎಲ್‌ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಬೆಳಗಾವಿ ಇವರ ಸಹಯೋಗದಲ್ಲಿ ನೇರ ಪೋನ್-ಇನ್ ಪ್ರಸಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶುಕ್ರವಾರ ದಿ. 11ರಂದು ಬೆಳಗ್ಗೆ 10 ರಿಂದ 11 ಗಂಟೆವರೆಗೆ ನಡೆದ ಕಾರ್ಯಕ್ರಮದಲ್ಲಿ ಚಿಕ್ಕ ಮಕ್ಕಳಲ್ಲಿ ಕಂಡುಬರುವ ಸಾಮಾನ್ಯ ರೋಗಗಳು ಮತ್ತು ಚಿಕಿತ್ಸೆ ಕುರಿತು ಪ್ರಶ್ನೋತ್ತರ ಮೂಲಕ ಜನಜಾಗೃತಿ ಮೂಡಿಸಲಾಯಿತು.
ಬೆಳಗಾವಿ ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ಚಿಕ್ಕ ಮಕ್ಕಳ ವೈದ್ಯೆ ಡಾ. ಸೋನಾಲಿ ಬಿಜ್ಜರಗಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಚಿಕ್ಕ ಮಕ್ಕಳ ಆರೋಗ್ಯ ಸೂಕ್ಷ್ಮವಾಗಿರುತ್ತದೆ, ಸ್ವಲ್ಪ ವ್ಯತ್ತಾಸವಾದರೂ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ, ಅಲ್ಲದೆ ಮಕ್ಕಳಿಗೆ ಎನಾಗುತ್ತದೆ ಎಂಬುದು ಹೇಳಲೂ ಸಹ ತಿಳಿಯುವುದಿಲ್ಲ, ಆದ್ದರಿಂದ ಪೋಷಕರು ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಚಿಕ್ಕ ಮಕ್ಕಳಲ್ಲಿ ಕಂಡುಬರುವ ಸಾಮಾನ್ಯ ರೋಗಗಳು ಯಾವುವು, ಲಕ್ಷಣಗಳು, ಪತ್ತೆ ಹಚ್ಚುವುದು ಹೇಗೆ? ಚಿಕಿತ್ಸೆ ಮತ್ತು ಬೆಳಗಾವಿಯ ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ಚಿಕ್ಕ ಮಕ್ಕಳ ವಿಭಾಗದಲ್ಲಿರುವ ಸೇವೆಗಳ ಕುರಿತು ಮಾಹಿತಿ ಹಂಚಿಕೊಂಡರು ಮತ್ತು ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಿದರು. ವೇಣುಧ್ವನಿಯ ಕಾರ್ಯಕ್ರಮ ನಿರ್ವಾಹಕಿ ಮನಿಷಾ ಪಿ. ಎಸ್. ಮತ್ತು ಮಂಜುನಾಥ ಪೈ ಕಾರ್ಯಕ್ರಮ ನಡೆಸಿಕೊಟ್ಟರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 