ನಕಲಿ ಕ್ಲಿನಿಕ್ ಮೇಲೆ ಆರೋಗ್ಯಾಧಿಕಾರಿಗಳ ದಾಳಿ : ನಕಲಿ ಆಸ್ಪತ್ರೆಗೆ ಬೀಗ
Health officials raid fake clinic: Fake hospital locked down
ಕಂಪ್ಲಿ 04: ಪಟ್ಟಣದ ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ಸ್ಥಳೀಯ ಪಟ್ಟಣದ ಸಂತೆ ಮಾರುಕಟ್ಟೆ ಹತ್ತಿರದ ಮೋಹನ್ ಕ್ಲಿನಿಕ್ (ಖಾಸಗಿ ಆಸ್ಪತ್ರೆ) ಮೇಲೆ ಆರೋಗ್ಯಾಧಿಕಾರಿಗಳ ತಂಡ ದಿಢೀರನೆ ದಾಳಿ ನಡೆಸಿ ನಕಲಿ ಆಸ್ಪತ್ರೆಗೆ ಬೀಗ ಹಾಕಿದ್ದಾರೆ. ದಾಳಿ ಬಳಿಕ ಜಿಲ್ಲಾ ಆಸಂಕ್ರಾಮಿಕ ರೋಗ ಅಧಿಕಾರಿ ಡಾ.ವೀರೇಂದ್ರ ಕುಮಾರ್ ಮಾತನಾಡಿ ಕೆಪಿಎಂಇ (ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆ) ನಿಯಮದ ಪ್ರಕಾರ ವೈದ್ಯಕೀಯ ಶಿಕ್ಷಣ, ವೈದ್ಯಕೀಯ ಚಿಕಿತ್ಸೆಗೆ ಬೇಕಾದ ಯಾವುದೇ ವಿದ್ಯಾರ್ಹತೆ ಇರದ ಕಾರಣ ಆಸ್ಪತ್ರೆ ಸೀಜ್ ಮಾಡಲಾಗಿದೆ ಎಂದು ತಿಳಿಸಿದರು. ಈ ಖಾಸಗಿ ಆಸ್ಪತ್ರೆಯವರಿಗೆ ಈಗಾಗಲೇ ಸೂಕ್ತ ಎಚ್ಚರಿಕೆ ನೀಡಲಾಗಿತ್ತು. ಆದರೂ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಣೆ ಮಾಡುತ್ತಿರುವುದರಿಂದ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಿವರಿಸಿದರು. ತಾಲ್ಲೂಕು ವೈದ್ಯಾಧಿಕಾರಿ ಡಾ.ಜಿ.ಅರುಣ್, ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿ ವಿರೂಪಾಕ್ಷಿ,ತಾಲ್ಲುಕು ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿ ಪಿ.ಬಸವರಾಜ, ಕೆಪಿಎಂಇ ಸಂಯೋಜಕ ಗೋಪಾಲ ದಾಳಿಯಲ್ಲಿ ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 