ಆರೋಗ್ಯ ರಕ್ಷಣೆ ಎಲ್ಲರ ಜವಾಬ್ದಾರಿ: ಸಿಇಓ ಭುವನೇಶ ಪಾಟೀಲ
Healthcare is everyone's responsibility: CEO Bhuvanesh Patil
ಧಾರವಾಡ . 09: ಸಾರ್ವಜನಿಕರ ಆರೋಗ್ಯ ರಕ್ಷಣೆಯು ಸರ್ಕಾರದ ಜವಾಬ್ದಾರಿ ಮಾತ್ರ ಅಲ್ಲ, ಎಲ್ಲ ನಾಗರಿಕರ ಜವಾಬ್ದಾರಿಯೂ ಆಗಿದೆ. ವೈರಲ್ ಹೆಪಟೈಟಿಸ್ ಕುರಿತು ಜಾಗೃತಿ ಮೂಡಿಸುವುದು ಮತ್ತು ಕ್ಷಯರೋಗಿಗಳಿಗೆ ಪೌಷ್ಠಿಕ ಆಹಾರ ಪೂರೈಸುವುದರ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಹೇಳಿದರು.
ಅವರು ಇಂದು (ಸೆ.9) ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ವೈರಲ್ ಹೆಪಟೈಟಿಸ್ ದಿನಾಚರಣೆ ಮತ್ತು ಕ್ಷಯರೋಗಿಗಳಿಗೆ ಪೌಷ್ಠಿಕ ಆಹಾರ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.
ಗ್ರಾಮೀಣ ಜನರಿಗೆ ಹಾಗೂ ಕೊಳಚೆ ಪ್ರದೇಶಗಳಲ್ಲಿನ ಜನರಿಗೆ ಸಾಂಕ್ರಾಮಿಕ ಕಾಯಿಲೆಗಳ ಬಗ್ಗೆ ಅರಿವು ಮೂಡಿಸಬೇಕು. ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಸಹ ಮಾಡಬೇಕು. ಈ ಕಾಯಿಲೆ ಬಂದಿದೆ ಎಂದು ಯಾರೂ ಭಯಪಡುವ ಅವಶ್ಯಕತೆ ಇರುವುದಿಲ್ಲ. ಅದಕ್ಕಾಗಿ ಸರಕಾರದವರು ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಅದರ ಸದುಪಯೋಗವನ್ನು ಎಲ್ಲರೂ ಪಡೆಯಬೇಕು ಎಂದು ಹೇಳಿದರು.
ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಮ್.ಹೊನಕೇರಿ ಅವರು ಮಾತನಾಡಿ, ಇದು ಬೇಗನೆ ಎಲ್ಲರಿಗೂ ಹರಡುವ ರೋಗ. ಸಮಯಕ್ಕೆ ತಕ್ಕ ಚಿಕಿತ್ಸೆ, ಲಸಿಕೆ ಹಾಗೂ ಆರೋಗ್ಯಕರ ಜೀವನಶೈಲಿ ಅನುಸರಿಸುವ ಮೂಲಕ ತಡೆಗಟ್ಟಬಹುದು. ಆರೋಗ್ಯ ಇಲಾಖೆ ನಡೆಸುತ್ತಿರುವ ಜಾಗೃತಿ ಕಾರ್ಯಕ್ರಮಗಳಿಗೆ ಜನ ಸಹಕಾರ ನೀಡಿದರೆ, ಭವಿಷ್ಯದಲ್ಲಿ ಹೆಪಟೈಟಿಸ್ ಹಾಗೂ ಕ್ಷಯರೋಗ ನಿರ್ಮೂಲನೆ ಸಾಧ್ಯವಾಗುತ್ತದೆ ಎಂದು ಹೇಳಿದರು.
ಕ್ಷಯರೋಗಿಗಳಿಗಾಗಿ ನೀಡಲಾಗುತ್ತಿರುವ ಪೌಷ್ಠಿಕ ಆಹಾರವು ಅವರ ದೇಹದ ಶಕ್ತಿ ಹೆಚ್ಚಿಸಲು ನೆರವಾಗುತ್ತದೆ. ಹೆಪಟೈಟಿಸ್ ದಿನಾಚರಣೆಯ ಅಂಗವಾಗಿ ಜನರಲ್ಲಿ ರೋಗದ ಕಾರಣಗಳು, ತಡೆಗಟ್ಟುವ ಕ್ರಮಗಳು ಮತ್ತು ಚಿಕಿತ್ಸೆಯ ಕುರಿತು ಅರಿವು ಮೂಡಿಸುವುದು ನಮ್ಮ ಉದ್ದೇಶ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬಿತ್ತಿ ಪತ್ರ ಬಿಡುಗಡೆ ಹಾಗೂ ಕ್ಷಯರೋಗಿಗಳಿಗೆ ಪೌಷ್ಠಿಕ ಆಹಾರ ಕಿಟ್ ವಿತರಣೆಯನ್ನು ಮಾಡಲಾಯಿತು.
ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ. ರವೀಂದ್ರ ಬೊವೇರ ಅವರು ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಆರ್.ಪಾತ್ರೋಟ ಅವರು ಸ್ವಾಗತಿಸಿದರು. ಎನ್. ಎಂ. ಅಗಡಿ ಅವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.
ಕಾರ್ಯಕ್ರಮದಲ್ಲಿ, ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಸಂಗಪ್ಪ ಗಾಬಿ, ಬೆಳಗಾವಿ ವಿಭಾಗದ ವಿಶ್ವ ಆರೋಗ್ಯ ಸಂಸ್ಥೆ ಸಲಹೆಗಾರರ ಡಾ.ಸತೀಶ್ ಘಾಟಕೆ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ ಚಿತ್ತರಗಿ, ಎನ್.ವಿ.ಹೆಚ್.ಸಿ.ಪಿಯ ಫಿಜಿಶನ್ ನೋಡಲ್ ಅಧಿಕಾರಿ ಡಾ. ಕಿರಣ ಕುಲಕರ್ಣಿ ಅವರು ವೇದಿಕೆಯ ಮೇಲೆ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು, ಹಾಗೂ ರೋಗಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 