ಸ್ವಸ್ಥ ಭಾರತ, ಸ್ವಚ್ಛ ಭಾರತ ಇಂದಿನ ಅಗತ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ
Healthy India, Clean India is the today need: Minister Lakshmi Hebbalkar
ಬೆಳಗಾವಿ, 27 : ಸ್ವಯಂ ಸೇವಾ ಸಂಸ್ಥೆ ಆರ್ ಸಿಎಂ ಸ್ವಸ್ಥ ಭಾರತ ಮತ್ತು ಸ್ವಚ್ಛ ಭಾರತ ನಿರ್ಮಾಣಕ್ಕಾಗಿ ಕಳೆದ 25 ವರ್ಷಗಳಿಂದ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿದೆ. ಇದು ಇಂದಿನ ಅಗತ್ಯ ಕೂಡ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಮರಾಠಾ ಮಂಗಲ ಕಾರ್ಯಾಲಯದಲ್ಲಿ ಶನಿವಾರ ನಡೆದ ಆರ್ ಸಿಎಂ ಸಂಸ್ಥೆಯ 25ನೇ ವರ್ಷದ ಸಂಭ್ರಮಾಚರಣೆ ಹಾಗೂ ಜಾಗೃತಿ ರ್ಯಾಲಿಯಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
25 ವರ್ಷಗಳಿಂದ ಸಮಾಜಮುಖಿ ಚಟುವಟಿಕೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಈ ಸಂಸ್ಥೆ ಆರೋಗ್ಯ ಕಾಳಜಿ, ಮಹಿಳಾ ಸಬಲೀಕರಣ, ಪರಿಸರ ಸಂರಕ್ಷಣೆ ಹಾಗೂ ಶಿಕ್ಷಣದ ಮೂಲಕ ಅನೇಕ ಜನರ ಜೀವನದಲ್ಲಿ ಬದಲಾವಣೆಯನ್ನು ತರುತ್ತಿದೆ. ರಕ್ತದಾನ ಶಿಬಿರ, ವ್ಯಸನಮುಕ್ತ ಅಭಿಯಾನ, ಸ್ಯಾನಿಟರಿ ಹೈಜಿನ್ ಜಾಗೃತಿ ಶಿಬಿರಗಳಂತಹ ಕಾರ್ಯಗಳು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಸಂಸ್ಥೆ ಇನ್ನಷ್ಟು ಜನ ಜೀವನಕ್ಕೆ ಬೆಳಕು ನೀಡಲಿ ಎಂದು ಅವರು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಸಂಜಯ ದೊರೆನ್ನವರ್, ಮುಖೇಶ್ ಕೊಟಾರಿ, ಪರಶುರಾಮ ಪಾಟೀಲ, ಕಟಾವಕರ್, ರಾಹುಲ್ ಕಾಂಬಳೆ, ಜ್ಯೋತಿಬಾ ಕಡೋಲ್ಕರ್, ಅಂಜಲಿ ಕೊಟಾದಿ, ಶ್ರೇಯಾ ದೊರೆನ್ನವರ್, ಶಿವಾಜಿ ಕಾಂಬಳೆ ಹಾಗೂ ಅನೇಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 