ಸ್ವಸ್ಥ್ಯ ನಾರಿ ಸಶಕ್ತ ಪರಿವಾರ ಅಭಿಯಾನ
Healthy Women and Empowered Families Campaign
ಧಾರವಾಡ .18: ಧಾರವಾಡ ನಗರದ ವಾರ್ಡ್ ನಂ. 8 ಆರೋಗ್ಯ ಕೇಂದ್ರದಲ್ಲಿ ನಿನ್ನೆ (ಸೆ.17) ಸ್ವಸ್ಥ್ಯ ನಾರಿ ಸಶಕ್ತ ಪರಿವಾರ ಅಭಿಯಾನವನ್ನು ಮಹಾನಗರ ಪಾಲಿಕೆ ಸದಸ್ಯ ಶಂಕರ ಶೇಳಕೆ ಅವರು ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಒಂದೇ ಸೂರಿನಡಿಯಲ್ಲಿ ಗರ್ಭಿಣಿ ತಪಾಸಣೆ, ಬಾಣಂತಿ ತಪಾಸಣೆ, ಲಸಿಕಾ ಕಾರ್ಯಕ್ರಮ, ಎನ್‌ಸಿಡಿ ಕಾರ್ಯಕ್ರಮ, ಕಿಶೋರಿಯರಿಗೆ ಋತುಚಕ್ರದ ಶುಚಿತ್ವದ ಬಗ್ಗೆ, ಪೌಷ್ಟಿಕ ಆಹಾರದ ಬಗ್ಗೆ, ತಿಳಿಸಲಾಯಿತು.
ಕಿವಿ, ಕಣ್ಣು, ಗಂಟಲು, ಮೂಗು ತಪಾಸಣೆ, ರಕ್ತಹೀನತೆ ಪರೀಕ್ಷೆ, ಕ್ಯಾನ್ಸರ್ ಪರೀಕ್ಷೆ, ಕ್ಷಯರೋಗ ಪರೀಕ್ಷೆ, ಟೆಲಿ ಮಾನಸ ಸೌಲಭ್ಯಗಳು, ಸಿಕಲ್ ಸೆಲ್ ರಕ್ತಹೀನತೆ, ತಾಯಿ ಕಾರ್ಡ್ ವಿತರಣೆ, ಪೌಷ್ಟಿಕ ಆಹಾರ ಶಿಬಿರ, ಅಂಗದಾನ ಮತ್ತು ರಕ್ತದಾನದ ಬಗ್ಗೆ ವಿಶೇಷ ಮಾಹಿತಿ ನೀಡಲಾಯಿತು.ಮನೆ ಬಾಗಿಲಿಗೆ ಆರೋಗ್ಯ ಸೇವೆಗಳನ್ನು ಸರ್ಕಾರದಿಂದ ಉಚಿತವಾಗಿ ತಲುಪಿಸಿಲಾಗುತ್ತಿದ್ದು, ಅದರ ಸದುಪಯೋಗವನ್ನು ಪಡೆಯುವಂತೆ ಜನರಿಗೆ ತಿಳಿಸಲಾಯಿತು.
ವೈದ್ಯಾಧಿಕಾರಿ ಡಾ.ಅರಣಾ ಅನ್ವೇಕರ ಅವರು ಅಭಿಯಾನದ ಕುರಿತು ಮಾಹಿತಿ ನೀಡಿದರು. ಪ್ರಾಥಮಿಕ ಆರೋಗ್ಯ ಸುರಿಕ್ಷಾಧಿಕಾರಿ ಚಂದ್ರಿಕಾ ದಮ್ಮಳ್ಳಿ ಅವರು ನಿರೂಪಿಸಿದರು.ಈ ಸಂದರ್ಭದಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಸಾರ್ವಜನಿಕರು ಉಪಸ್ಥಿತರಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 