ವಿದ್ಯಾರ್ಥಿಗಳಲ್ಲಿ ಆರೋಗ್ಯಕರ ಕ್ರೀಡಾ ಮನೋಭಾವನೆ ಮುಖ್ಯ: ಪಿ ಆಯ್ ಭಂಡಾರಿ
Healthy sportsmanship is important among students: P. A. Bhandari
ಹುಕ್ಕೇರಿ 30: ವಿದ್ಯಾರ್ಥಿಗಳು ಪಠ್ಯದೊಂದಿಗೆ ಕ್ರೀಡಾ ಮನೋಭಾವ ಅಳವಡಿಸಿಕೊಂಡು ಉತ್ತಮ ಸಾಧನೆಗಳನ್ನು ಮಾಡಬೇಕು ಪದವಿ ಪೂರ್ವ ಶಿಕ್ಷಣ ಉಪನಿರ್ದೇಶಕ ಪಿ ಆಯ್ ಭಂಡಾರಿ ಹೇಳಿದರು.
ಅವರು ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ಮತ್ತು ಸ್ಥಳಿಯ ಎಸ್ ಕೆ ಪದವಿ ಪೂರ್ವ ಮಹಾವಿದ್ಯಾಯ ಸಂಯುಕ್ತ ಆಶ್ರಯದಲ್ಲಿ ಪ್ರಸಕ್ತ ಸಾಲಿನ ಹುಕ್ಕೇರಿ ತಾಲೂಕಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಎರಡು ದಿನದ ಕ್ರೀಡಾಕೂಟಕ್ಕೆ ಉಪನಿರ್ದೆಶಕ ಪಿ ಆಯ್ ಭಂಡಾರೆ ಕ್ರೀಡಾ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು . ವಿದ್ಯಾರ್ಥಿಗಳಲ್ಲಿ ಆರೋಗ್ಯಕರ ಕ್ರೀಡಾ ಮನೋಭಾವನೆಯಿಂದ ಸ್ಪರ್ಧೆ ನೀಡಿ ಯಶಸ್ಸು ಸಾಧಿಸಲು ಸಾಧ್ಯವೆಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಅಧ್ಯಕ್ಷ ನ್ಯಾಯವಾದಿ ಅನಿಲ ಶೆಟ್ಟಿ ಮಾತನಾಡಿ ಕ್ರೀಡೆಗಳಲ್ಲಿ ಸೋಲು ಗೆಲುವಿಗೆ ಮಹತ್ವ ನೀಡದೆ ಕ್ರೀಡೆಯಲ್ಲಿ ಭಾಗವಹಿಸಿ ನಿರ್ಣಾಯಕರು ನೀಡಿದ ತಿಪುಗಳಿಗೆ ಮನ್ನಣೆ ನೀಡಬೇಕು ಎಂದರು. ದೈಹಿಕ ಶಿಕ್ಷಕ ಬಿಎಲ್ ನಾಯಿಕ ಪ್ರತಿಜ್ಞಾ ವಿಧಿ ಬೋಧಿಸಿದರು.
ಸಿ ಎಸ್ ತುಬಚಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಿವರುದ್ರ ಶೆಟ್ಟಿ, ಕಾರ್ಯದರ್ಶಿ ಚನ್ನಬಸಪ್ಪ ಶೆಟ್ಟಿ, ಕ್ರೀಡಾ ಸಂಯೋಜಕ ಅಜೇಯ ಮೋನೆ, ಎಮ್ ಆಯ್ ಮಠಪತಿ, ಮಂಗಲಾ ಹಂದಿಗುಂದ, ಸಿ ಆಯ್ ಗಂಧ, ಎಸ್ ಬಿ ಬುರ್ಜಿ, ಓಂಕಾರ ಹೆದ್ದೂರಶೆಟ್ಟಿ, ಪ್ರಾಚಾರ್ಯ ಎಸ್ ಡಿ ಬಸೆಟ್ಟಿ, ಬಿ ಎಲ್ ನಾಯಿಕ, ಎಸ್ ಆರ್ ಗಸ್ತಿ, ರಾಘವೇಂದ್ರ ಕುಲಕರ್ಣಿ, ಬಿ.ಬಿ ಹಿಡಕಲ್, ಡಾ.ಎಸ್ ಕಮತಗಿ, ಎಸ್ ಎನ್ ನಾಯಿಕ, ಪುರಸಭೆ ಸದಸ್ಯ ರಾಜು ಮುನ್ನೋಳಿ, ಶಂಕರ ಅಲಗರಾವುತ, ಸೋಮನಾಥ ಪರಕನಟ್ಟಿ, ವಿರೇಶ ಗಜಬರ, ಬಸವರಾಜ ನಂದಿಕೋಲಮಠ, ಮತ್ತಿತರರು ಉಪಸ್ಥಿತರಿದ್ದರು.
ಕ್ರೀಡಾಕೂಟದಲ್ಲಿ ಹುಕ್ಕೇರಿ ತಾಲೂಕಿನ ವಿವಿಧ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 