ನಿವೃತ್ತ ಶಿಕ್ಷಕ ಭಜಂತ್ರಿಗೆ ಭಾವಪೂರ್ಣ ಬೀಳ್ಕೊಡುಗೆ

ನಿವೃತ್ತ ಶಿಕ್ಷಕ ಭಜಂತ್ರಿಗೆ ಭಾವಪೂರ್ಣ ಬೀಳ್ಕೊಡುಗೆ  Heartfelt farewell to retired teacher Bhajantri

ಹಾವೇರಿ  01: ಹಳೆಜತ್ತಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಚನ್ನವೀರ​‍್ಪ ಭಜಂತ್ರಿ ಅವರಿಗೆ ಆತ್ಮೀಯ ಬೀಳ್ಕೊಡುಗೆ ಸಮಾರಂಭ ನಡೆಯಿತು.  

ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಬಿ. ಶ್ರೀನಿವಾಸ ಅವರು ಮಾತನಾಡಿ, ಶಿಕ್ಷಕರು ತಾವು ಬೋಧನೆ ಮಾಡಿದ ಶಾಲೆಯಲ್ಲಿಯೇ ವಿದ್ಯಾರ್ಥಿಗಳು, ಸಹೋದ್ಯೋಗಿಗಳು ಹಾಗೂ ಗ್ರಾಮಸ್ಥರಿಂದ ಗೌರವ ಸ್ವೀಕರಿಸುವುದು ಅವರ ಜೀವನದ ದೊಡ್ಡ ಗೌರವ ಎಂದು ಹೇಳಿದರು.

38 ವರ್ಷಗಳ ಸುದೀರ್ಘ ಶಿಕ್ಷಕ ಸೇವೆ ಸಲ್ಲಿಸಿದ ಭಜಂತ್ರಿಯವರ ಕಾರ್ಯ ಶ್ಲಾಘನೀಯವಾಗಿದ್ದು, ಹಲವು ತಲೆಮಾರುಗಳ ವಿದ್ಯಾರ್ಥಿಗಳ ಬದುಕಿಗೆ ದಾರಿ ತೋರಿಸಿದ್ದಾರೆ ಎಂದು ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದರು.  

ಸಮಾರಂಭದಲ್ಲಿ ಶಾಲಾ ಶಿಕ್ಷಕರು, ಸಿಬ್ಬಂದಿ, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿ ಭಜಂತ್ರಿ ಅವರಿಗೆ ಗೌರವ ಸಲ್ಲಿಸಿದರು. ಗ್ರಾಮ ಹಿರಿಯ ನಾಗರಿಕ ಚನ್ನಬಸಪ್ಪ ಪಕ್ಕೀರ​‍್ಪ ಕೋಡಿಹಳ್ಳಿ ಅವರು ಶಾಲಾ ಮಕ್ಕಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಿದರು.  

ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಮುತ್ತಪ್ಪ ಅಗಡಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಭರಮಗೌಡ್ರ, ಶಿಕ್ಷಣ ಸಂಯೋಜಕ ಎಂ.ಎಫ್‌. ಭಗವಂತಗೌಡ್ರ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಎಸ್‌.ಬಿ. ಮಠದ ಸ್ವಾಗತಿಸಿ ವಂದಿಸಿದರು. ಎಫ್‌.ಜಿ. ಕೊಕ್ಕರಗುಂದಿ ಕಾರ್ಯಕ್ರಮ ನಿರೂಪಿಸಿದರು.