ಡಾ. ಗುರುರಾಜ್ ಬಿ. ಕಲಕೋಟಿ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ
Heartfelt tribute to Dr. Gururaj B. Kalakoti.
ಲೋಕದರ್ಶನ ವರದಿ
ಹುಬ್ಬಳ್ಳಿ 18: ಹೊರಕೇರಿ ಮಾಸ್ಟರ್ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಶಿಕ್ಷಣ ತಜ್ಞ, ಕೆ.ಎಲ್.ಇ. ಸಂಸ್ಥೆಯ ಪಿ.ಸಿ. ಜಾಬಿನ್ ವಿಜ್ಞಾನ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಹಾಗೂ ಎನ್ಸಿಸಿ ಮೇಜರ್ ಆಗಿದ್ದ ಡಾ. ಗುರುರಾಜ್ ಬಿ. ಕಲಕೋಟಿ ಅವರ ಸ್ಮರಣಾರ್ಥ ಭಾವಪೂರ್ಣ ಶ್ರದ್ಧಾಂಜಲಿ ಸಭೆ ನಡೆಯಿತು. ಹಾವೇರಿ ಜಿಲ್ಲೆಯ ನೆಗಳೂರು ಸಂಸ್ಥಾನ ಹಿರೇಮಠದ ಷಟ್ಸ್ಥಳ ಬ್ರಹ್ಮ ಗುರುಶಾಂತೇಶ್ವರ ಮಹಾಸ್ವಾಮಿಗಳು ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು. ನೂರಾರು ಶಿಷ್ಯರು, ಅಭಿಮಾನಿಗಳು, ಬಂಧು-ಬಳಗ ಹಾಗೂ ಗಣ್ಯರು ಭಾಗವಹಿಸಿ ಡಾ. ಕಲಕೋಟಿ ಅವರ ಶಿಕ್ಷಣ ಕ್ಷೇತ್ರದ ಸೇವೆಯನ್ನು ಸ್ಮರಿಸಿ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಡಾ. ಗುರುರಾಜ್ ಬಿ. ಕಲಕೋಟಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಅವರ ಶಿಕ್ಷಣ, ಸಾಮಾಜಿಕ ಹಾಗೂ ಮಾನವೀಯ ಸೇವೆಯನ್ನು ಸ್ಮರಿಸಲಾಯಿತು. ಡಾ. ಕಲಕೋಟಿ ಅವರ ಶಿಷ್ಯರಾದ ಡಾ. ಸುರೇಶ್ ಡಿ. ಹೊರಕೇರಿ ಮಾತನಾಡಿ, ಅವರ ಅಗಲಿಕೆ ಶಿಕ್ಷಣ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದ್ದು, ಅವರ ಆದರ್ಶಗಳು ಸದಾ ಮಾರ್ಗದರ್ಶಿಯಾಗಿರಲಿವೆ ಎಂದು ತಿಳಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ಸಂತಾಪ ಸೂಚಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 