ಶಿರಹಟ್ಟಿ ರಾಜಕೀಯದಲ್ಲಿ ತೀವ್ರ ವಾಕ್ಸಮರ; ಮಾನಹಾನಿ ಮೊಕದ್ದಮೆ ಎಚ್ಚರಿಕೆ
Heated war of words in Shirahatti politics; warning of a defamation suit
ಗದಗ, ಜು.08: ಶಿರಹಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ವಾಗ್ವಾದ ತೀವ್ರಗೊಂಡಿದ್ದು, ಪರಸ್ಪರ ನಡುವೆ ಮಾನಹಾನಿ ಮೊಕದ್ದಮೆ ಹೂಡುವ ಎಚ್ಚರಿಕೆ ನೀಡಲಾಗಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹೊನ್ನಪ್ಪ ವಡ್ಡರ ಹಾಗೂ ವಕೀಲ ರವಿಕಾಂತ ಅಂಗಡಿ, ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದ್ದರೂ, ಶಾಸಕರ ಬೆಂಬಲಿಗರಿಂದ ಕಿರುಕುಳ ಮತ್ತು ಒತ್ತಡದ ವಾತಾವರಣ ನಿರ್ಮಾಣವಾಗಿರುವುದರಿಂದ ಗುತ್ತಿಗೆದಾರರು ಟೆಂಡರ್ ಪಡೆಯಲು ಮುಂದೆ ಬರುತ್ತಿಲ್ಲ ಎಂದು ಆರೋಪಿಸಿದರು.
ತಮ್ಮ ವಿರುದ್ಧ ಮಾಡಲಾಗಿರುವ ಎಲ್ಲ ಆರೋಪಗಳನ್ನು ದಾಖಲೆ ಸಮೇತ ಸಾಬೀತುಪಡಿಸಬೇಕು. ಇಲ್ಲವಾದಲ್ಲಿ ಆರೋಪ ಮಾಡಿದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫಕ್ಕೀರೇಶ ರಟ್ಟಿಹಳ್ಳಿ, ಜಾನು ಲಮಾಣಿ ಹಾಗೂ ಗಂಗಾಧರ ಮೆಣಸಿನಕಾಯಿ ವಿರುದ್ಧ ಮಾನಹಾನಿ ಮೊಕದ್ದಮೆ ಹೂಡಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು. ಕ್ಷೇತ್ರದಲ್ಲಿ ಕೆಲವು ಸಮುದಾಯಗಳ ವಿರುದ್ಧ ಜಾತಿ ನಿಂದನೆ ಪ್ರಕರಣಗಳನ್ನು ದಾಖಲಿಸಿ ಕಿರುಕುಳ ನೀಡಲಾಗುತ್ತಿದೆ. ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತ ನಡೆಸುವಲ್ಲಿ ಶಾಸಕರು ವಿಫಲರಾಗಿದ್ದಾರೆ ಎಂದು ಅವರು ಆರೋಪಿಸಿದರು.
ಶಾಸಕರ ಕಾರು ಚಾಲಕರ ಸಾವಿನ ನಂತರ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಿಲ್ಲ ಹಾಗೂ ನ್ಯಾಯಕ್ಕಾಗಿ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟಿಲೇರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಲಾಯಿತು. ಮೆಕ್ಕೆಜೋಳ ಬೆಳೆ ಸಮಸ್ಯೆ ಸೇರಿದಂತೆ ರೈತರ ಹಲವು ಪ್ರಶ್ನೆಗಳಿಗೆ ಶಾಸಕರು ಸ್ಪಂದಿಸಿಲ್ಲ. ರೈತರ ಸಮಸ್ಯೆಗಳ ಕುರಿತು ಕ್ರಮ ಕೈಗೊಳ್ಳದಿದ್ದರೆ ಜನಾಂದೋಲನ ರೂಪಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ಮಾತನಾಡಿದ ವಕೀಲ ರವಿಕಾಂತ ಅಂಗಡಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫಕ್ಕೀರೇಶ ರಟ್ಟಿಹಳ್ಳಿ ಪಕ್ಷದ ಅನುಮತಿ ಪಡೆಯದೇ ಸಾರ್ವಜನಿಕವಾಗಿ ಆರೋಪಗಳನ್ನು ಮಾಡಿರುವುದಾಗಿ ದೂರಿದರು. ಶಿರಹಟ್ಟಿ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಸೂಕ್ತ ಗೌರವ ಸಿಗುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಚಂದ್ರು ಮಾಗಡಿ, ಶಿವಾನಂದ ಬನ್ನಿಮಟ್ಟಿ, ಮುತ್ತು ನೀರಲಗಿ, ಬಸವರಾಜ ಜಾಲಗಾರ, ಮಂಜುನಾಥ ದೊಡ್ಡಗೌಡ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ 