ಸವದತ್ತಿಯಲ್ಲಿ ಭಾರಿ ಮಳೆಗೆ ತತ್ತರಿಸಿದ ಜನಜೀವನ: ಮನೆಗಳಿಗೆ ನುಗ್ಗಿದ ನೀರು
Heavy rain disrupts life in Savadatti: Water enters homes
ಸವದತ್ತಿ 08: ನಗರದಲ್ಲಿ ಭಾರಿ ಮಳೆಗೆ ನಗರದ ವಿವಿಧ ಬಡಾವಣೆಗಳಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಗಿರಿಜಣ್ಣವರ ಓಣಿ, ಬಜಾರ್ ರೋಡ್, ರಾಮಾಪೂರಸೈಟ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿದ್ದು, ನಾಗರಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ತಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ಚರಂಡಿಯ ಕೊಳಚೆ ನೀರು ಹಾಗೂ ಮಳೆ ನೀರು ನುಗ್ಗಿದ್ದರಿಂದ ಜನಜೀವನ ದುಸ್ತರವಾಗಿದೆ. ಮನೆಯಲ್ಲಿರುವ ಅಗತ್ಯ ವಸ್ತುಗಳು, ಧಾನ್ಯಗಳು ಮತ್ತು ಗೃಹೋಪಯೋಗಿ ವಸ್ತುಗಳು ಹಾನಿಗೊಳಗಾಗಿವೆ. ಸರಿಯಾದ ಒಳಚರಂಡಿ ವ್ಯವಸ್ಥೆ ಇಲ್ಲದಿರುವುದು ಮತ್ತು ಕಸಕಡ್ಡಿಗಳಿಂದ ಚರಂಡಿಗಳು ತುಂಬಿ ತುಳುಕುತ್ತಿರುವುದರಿಂದ ನೀರು ರಸ್ತೆ ಮೇಲೆ ಹರಿಯುತ್ತಿದೆ. ರಸ್ತೆಗಳಲ್ಲಿ ಮೊಣಕಾಲು ಮಟ್ಟದಷ್ಟು ನೀರು ನಿಂತಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳು ಪರದಾಡುವಂತಾಗಿದೆ. ನಗರಸಭೆ ಅಧಿಕಾರಿಗಳು ಮತ್ತು ಸ್ಥಳೀಯ ಜನಪ್ರತಿನಿಧಿಗಳು ಈ ಕೂಡಲೇ ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಬೇಕು. ನೀರು ಸರಾಗವಾಗಿ ಹರಿದು ಹೋಗಲು ತುರ್ತು ಕ್ರಮ ಕೈಗೊಳ್ಳಬೇಕು ಮಳೆಯ ಆರ್ಭಟ ಮುಂದುವರಿದಿದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಅವಘಡಗಳು ಸಂಭವಿಸುವ ಭೀತಿ ವ್ಯಕ್ತವಾಗಿದೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 