ಕೋಯಿಕೋಡ್, ಆ 06 ದೇಶಾದ್ಯಂತ ಹಲವು ರಾಜ್ಯಗಳಲ್ಲಿ ಎಡಬಿಡದೆ ವರ್ಷಧಾರೆಯಾಗುತ್ತಿದೆ ಕೇರಳದಲ್ಲಿ ಸೋಮವಾರದಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ, ಮಾವೂರು ಮತ್ತು ಸತ್ಯಮಂಗಲಂ ಪಂಚಾಯತಿ ಜಲಾವೃತವಾಗಿದ್ದು, ನೂರಾರು ಎಕರೆ ಪ್ರದೇಶದಲ್ಲಿ ತಲೆಯೆತ್ತಿದ್ದ ಬೆಳೆ ನಾಶವಾಗಿದೆ
ಈ ಹಿನ್ನೆಲೆಯಲ್ಲಿ ಕೋಯಿಕ್ಕೋಡ್ ಹಾಗೂ ಮಲಪ್ಪುರಮ್ ಜಿಲ್ಲೆಗಳಲ್ಲಿ ಮಂಗಳವಾರದಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ತಗ್ಗು ಪ್ರದೇಶಗಳ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ
ಕಂದಾಯ ಇಲಾಖೆ ಮೂಲಗಳ ಪ್ರಕಾರ, ಚಲಿಯಾರ್ ಮತ್ತು ಐರಾವಂಜಿಪುಳ ನದಿ ಉಕ್ಕಿ ಹರಿಯುತ್ತಿದ್ದು, ಜಲಾನಯನ ಪ್ರದೇಶಗಳ ಸುತ್ತಲೂ ಪರಿಸ್ಥಿತಿ ಉಂಟಾಗಿದೆ.