ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಮಳೆ ಎಚ್ಚರಿಕೆ
ಬೆಂಗಳೂರು, ಆ.25- ಮುಂದಿನ ಎರಡು ದಿನಗಳ ನಂತರ ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ದಟ್ಟ ಮೋಡಗಳು ಆವರಿಸುತ್ತಿದ್ದು, ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇರುವುದರಿಂದ 27ರಿಂದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಕನರ್ಾಟಕ ರಾಜ್ಯ ನೈಸಗರ್ಿಕ ವಿಕೋಪ ಉಸ್ತುವಾರಿ ಕೇಂದ್ರ ಎಚ್ಚರಿಕೆ ನೀಡಿದೆ.
ಕಳೆದ ವಾರ ರಾಜ್ಯದಲ್ಲಿ ಸುರಿದ ಭಾರೀ ಮಳೆಗೆ ಕೊಡಗು ಜಿಲ್ಲೆಯಲ್ಲಿ ಪ್ರವಾಹ, ಗುಡ್ಡ ಕುಸಿತ ಉಂಟಾಗಿ ಆಸ್ತಿ-ಪಾಸ್ತಿ, ಸಾವು-ನೋವು ಸಂಭವಿಸಿ ಪರಿಹಾರ ಕಾರ್ಯಗಳು ಇಂದಿಗೂ ಮುಂದುವರಿದಿವೆ.
ದಕ್ಷಿಣ ಕನ್ನಡ, ಮಲೆನಾಡು, ಕರಾವಳಿ ಭಾಗದಲ್ಲೂ ಕೂಡ ಮಳೆ ಅನಾಹುತ ಸಂಭವಿಸಿತ್ತು. ರಸ್ತೆ, ಸೇತುವೆಗಳು ಹಾನಿಯಾಗಿದ್ದವು. ಈಗ ಮತ್ತೆ ಮಳೆ ಬಂದರೆ ಮತ್ತಷ್ಟು ಸಮಸ್ಯೆಗಳು ಉಲ್ಬಣವಾಗುವ ಸಾಧ್ಯತೆ ಇದೆ. ಕಳೆದ ಮೂರು ದಿನಗಳಿಂದ ಕೊಂಚ ಬಿಡುವು ನೀಡಿದ್ದ ಮಳೆ ಶುಕ್ರವಾರ ರಾಜ್ಯದ ಹಲವು ಭಾಗಗಳಲ್ಲಿ ಸುರಿಯಿತು.
ಬೆಂಗಳೂರು, ಕರಾವಳಿ ಘಟ್ಟ ಪ್ರದೇಶ ಸೇರಿದಂತೆ ಹಲವೆಡೆ ಮಳೆಯಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿಯುವ ಸಾಧ್ಯತೆ ಇರುವುದರಿಂದ ಎರಡು-ಮೂರು ದಿನಗಳಲ್ಲಿ ರಾಜ್ಯದ ಹಲವೆಡೆ ಸಾಧಾರಣ ಮಳೆ. ಕರಾವಳಿ, ಮಲೆನಾಡು ಭಾಗಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ನೈಸಗರ್ಿಕ ವಿಕೋಪ ಕೇಂದ್ರ ಎಚ್ಚರಿಕೆ ನೀಡಿದೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 