ಕಾಗವಾಡ ತಾಲೂಕಿನಾದ್ಯಂತ ಭಾರಿ ಮಳೆ
Heavy rains across Kagwad taluk
ಕಾಗವಾಡ 12: ಮುಂಗಾರು ಮಳೆ ಆರಂಭವಾಗಿದ್ದು, ಕಾಗವಾಡ ತಾಲೂಕಿನಾದ್ಯಂತ ಬುಧವಾರ ದಿ. 12 ರಂದು ಮಧ್ಯಾಹ್ನ 2 ಗಂಟೆಯಿಂದ 5 ಗಂಟೆಯ ವರೆಗೆ ಭಾರಿ ಮಳೆಯಾಗಿದ್ದು, ಮಳೆಯಿಂದಾಗಿ ರಸ್ತೆ ಮೇಲೆ ನೀರು ಹರಿದು ಬಂದಿರುವುದರಿಂದ ವಾಹನ ಸವಾರರು ಪರದಾಡುವ ಪರಿಸ್ಥಿತಿ ಉಂಟಾಯಿತು. ಸತತ 3 ಗಂಟೆಗಳ ಕಾಲ ಸುರಿದ ಮಳೆಯಿಂದಾಗಿ ಹಳ್ಳಕೊಳ್ಳಗಳು ತುಂಬಿ ಹರಿಯಲಾರಂಭಿಸಿವೆ. ಮಳೆಯ ಜೊತೆಗೆ ಗುಡುಗು ಸಿಡಿಲಿನ ಅಬ್ಬರವೂ ಜೋರಾಗಿದ್ದು, ಇದು ಮುಂಗಾರು ಮಳೆಯೋ ಅಥವಾ ಅಕಾಲಿಕ ಮಳೆಯೋ ತಿಳಿಯದಂತಾಗಿದೆ. ತಾಲೂಕಿನ ಕಾಗವಾಡ, ಶೇಡಬಾಳ, ಉಗಾರ, ಐನಾಪೂರ, ಮೋಳೆ, ಕವಲಗುಡ್ಡ, ಶಿರಗುಪ್ಪಿ, ಜುಗೂಳ ಗ್ರಾಮದಲ್ಲಿಯೂ ಮಳೆ ಜೋರಾಗಿತ್ತು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 