ನವದೆಹಲಿ, ಅ 15: ಕರ್ನಾಟಕ ಮತ್ತು ಕೇರಳದ ವಿವಿಧ ಭಾಗಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೇರಳ - ಕರ್ನಾಟಕ ಅಲ್ಲದೇ ತಮಿಳುನಾಡು, ಪುದುಚೆರಿ, ಕಾರೈಕಲ್ ಮುಂತಾದ ಪ್ರದೇಶಗಳಲ್ಲೂ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ನಾಗಾಲ್ಯಾಂಡ್, ಅಸ್ಸಾಂ, ಮಣಿಪುರ, ಮಿಜೋರಾಂ ಮತ್ತು ದೇಶದ ವಾಣಿಜ್ಯ ನಗರಿ ಮುಂಬೈನಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.