ಒಂದು ವಾರದವರೆಗೆ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆ
Heavy rains with thunderstorms across the state for a week
ಬೆಂಗಳೂರು 03: ಮುಂದಿನ ಏಳು ದಿನ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವು ಜಿಲ್ಲೆಗಳಲ್ಲಿ ಅತ್ಯಂತ ಹೆಚ್ಚಿನ, ಕೆಲವು ಕಡೆಗಳಲ್ಲಿ ಧಾರಾಕಾರ ಮಳೆಯನ್ನು ನಿರೀಕ್ಷಿಸಲಾಗಿದೆ. ಮಧ್ಯ ಮತ್ತು ಪೂರ್ವ ಭಾರತದ ಮೂಲಕ ಸಾಗುವ ಮುಂಗಾರು ಮಾರುತದಿಂದ ಮಹಾರಾಷ್ಟ್ರ-ಕರ್ನಾಟಕ ಕರಾವಳಿಯುದ್ದಕ್ಕೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಗುರುವಾರ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯ ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿಮೀ ವೇಗದ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ. ಕರಾವಳಿಯಲ್ಲಿ ಮುಂದಿನ ಎರಡು ದಿನ ಇದೇ ಪರಿಸ್ಥಿತಿ ಮುಂದುವರೆಯುವ ನಿರೀಕ್ಷೆಯಿದೆ. ನಂತರ ಕ್ರಮೇಣ ತೀವ್ರತೆಯು ಕಡಿಮೆಯಾಗಲಿದೆ. ಆದಾಗ್ಯೂ ಹಗುರ, ಸಾಧಾರಣ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎನ್ನಲಾಗಿದೆ.
ಬೆಳಗಾವಿ, ಧಾರವಾಡದಲ್ಲೂ ಭಾರಿ ಮಳೆ: ಉತ್ತರ ಒಳನಾಡಿನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಜುಲೈ 3 ಮತ್ತು 4 ರಂದು ಗಂಟೆಗೆ 40 ರಿಂದ 50 ಕಿಮೀ ವೇಗದ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಧಾರವಾಡದಲ್ಲೂ ಭಾರಿ ಮಳೆ ನಿರೀಕ್ಷೆಯಿದೆ. ಇನ್ನೂ ಬೀದರ್, ಬಾಗಲಕೋಟೆ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಮುಂಗಾರು ಅವಧಿಯುದ್ದಕ್ಕೂ ಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗಿನಲ್ಲಿ ಇಂದು ಮತ್ತು ನಾಳೆ ಭಾರಿ ಮಳೆ ನಿರೀಕ್ಷಿಸಲಾಗಿದೆ. ಇತರ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ.
ಜುಲೈ 7 ರಿಂದ ರಾಜ್ಯಾದ್ಯಂತ ಮಳೆಯ ತೀವ್ರತೆ ಕಡಿಮೆಯಾಗುವ ನಿರೀಕ್ಷೆಯಿದೆ. ಆದಾಗ್ಯೂ, ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಜುಲೈ 9 ರವರೆಗೆ ಮುಂದುವರಿಯಬಹುದು ಎನ್ನಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 