ವಾಯುಭಾರ ಕುಸಿತ ದಿಂದ ಭಾರೀ ಗಾಳಿ ,ಮಳೆ : ಜನ ಎಚ್ಚರದಿಂದಿರಲು ಮನವಿ

ವಾಯುಭಾರ ಕುಸಿತ ದಿಂದ ಭಾರೀ ಗಾಳಿ ,ಮಳೆ : ಜನ ಎಚ್ಚರದಿಂದಿರಲು ಮನವಿ Heavy winds, rain due to atmospheric depression: People urged to be alert

ಕಾರವಾರ 14: ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಬಂಗಾಲ ಕೊಲ್ಲಿಯಲ್ಲಿ ವಾಯು ಭಾರ ಕುಸಿತ ಉಂಟಾಗಿದೆ. ಕಾರಣ ಚಂಡಮಾರುತ ಬೀಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿಯಲ್ಲಿ ಅಸ್ಥಿರ ಹವಾಮಾನದ ಇದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ತಿಳಿಸಿದ್ದಾರೆ.

ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಸುಮಾರು 40 ರಿಂದ 60 ಕಿಮೀ ವೇಗದಲ್ಲಿ ಗಾಳಿಯು ಮುಂದಿನ 24 ಗಂಟೆಗಳಲ್ಲಿ ಬೀಸುವ ಸಾಧ್ಯತೆಯಿರುತ್ತದೆ.ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆ ತೆರಳದಂತೆ ಸೂಚಿಸಲಾಗಿದೆ . ಮುಂದಿನ ಹವಾಮಾನ ಮುನ್ಸೂಚನೆ ನೋಡಿಕೊಂಡು ಮೀನುಗಾರಿಕೆಯನ್ನು ಮಾಡಬೇಕು ಎಂದು ತಿಳಿಸಿದ್ದಾರೆ. ದಿನಗಳಲ್ಲಿ ಸಾರ್ವಜನಿಕರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ. ಪ್ರವಾಸಿಗರು, ಹಾಗೂ ಸಾರ್ವಜನಿಕರು ನದಿ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.ನದಿ ತೀರದಲ್ಲಿ ವಾಸಿಸುವವರು ಹಠಾತ್ ಪ್ರವಾಹ ಉಂಟಾಗಬಹುದಾದ ಹಿನ್ನೆಲೆಯಲ್ಲಿ ಸುರಕ್ಷಿತ ಸ್ಥಳಕ್ಕೆ ತೆರಳಬೇಕು. ಜಿಲ್ಲೆಯ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ನದಿಯ ದಡದಲ್ಲಿ ಯಾವುದೇ ಸಮಯದಲ್ಲಿ ಪ್ರವಾಹ ಉಂಟಾಗಬಹುದಾದ ಸಾಧ್ಯತೆ ಇರುವುದರಿಂದ ಅಂತಹ ಸಾರ್ವಜನಿಕರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರವಾಗಿ ಎಂದು ಸಲಹೆ ನೀಡಿದ್ದಾರೆ.

ಮಳೆಯ ಜೊತೆಗೆ ಗಾಳಿ ಕೂಡಾ 40-60 ಕಿ.ಮೀ ವೇಗದಿಂದ ಬೀಸುವ ಸಾಧ್ಯತೆಯಿರುವುದರಿಂದ ಅಪಾಯಕಾರಿ ಮರಗಳಿರುವ ಮನೆಗಳಲ್ಲಿಯ ಜನರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವುದು ಮತ್ತು ಮರಗಳ ಕೆಳಗೆ ಅಶ್ರಯ ಪಡೆಯದಂತೆ ಸೂಚಿಸಲಾಗಿದೆ. ಗುಡ್ಡದ ಇಳಿಜಾರಿನ ಪ್ರದೇಶದಲ್ಲಿ ವಾಸಿಸುವರು ಕೂಡಾ ಮಳೆಯ ತೀವ್ರತೆ ನೋಡಿಕೊಂಡು, ಸುರಕ್ಷತಾ ಸ್ಥಳಕ್ಕೆ ಸ್ಥಳಾಂತರವಾಗಬೇಕು ಎಂದು ಸೂಚಿಸಿದ್ದಾರೆ.ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆವಹಿಸಬೇಕು.ತುರ್ತು ಸೇವೆಗೆ ದಿನದ 24 ತಾಸು ಕಂಟ್ರೋಲ್ ರೂಮ್ ಟೋಲ್ ಪ್ರೀ ಸಂಖ್ಯೆ 08382-229857 ಮತ್ತು ವಾಟ್ಸಪ್ ಸಂಖ್ಯೆ 9483511015 ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.