ವಿಠ್ಠಲ -ರುಕ್ಮಿಣಿ ದೇವಸ್ಥಾನ ಕಾಮಗಾರಿಗೆ ಹೆಬ್ಬಾಳಕರ್ ಭೂಮಿ ಪೂಜೆ
Hebbalkar Bhoomi Puja for Vitthala-Rukmini temple work
ಬೆಳಗಾವಿ 08: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕೀಣೆ ಗ್ರಾಮದಲಿ ವಿಠ್ಠಲ ರುಕ್ಮಿಣಿ ದೇವಸ್ಥಾನದ ನೂತನ ಕಟ್ಟಡದ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾನುವಾರ ಭೂಮಿ ಪೂಜೆ ನೆರವೇರಿಸಿದರು.
ಸುಮಾರು 60 ಲಕ್ಷ ರೂ.ಗಳ ವೆಚ್ಚದಲ್ಲಿ ಈ ದೇವಸ್ಥಾನ ನಿರ್ಮಾಣವಾಗಲಿದೆ. ಗ್ರಾಮಸ್ಥರ ಬೇಡಿಕೆಯಂತೆ ವಿಶೇಷ ಪ್ರಯತ್ನ ಮಾಡಿ ಅನುದಾನ ಮಂಜೂರು ಮಾಡಿಸಲಾಗಿದೆ. ಈಗಾಗಲೆ ಕ್ಷೇತ್ರದಲ್ಲಿ 140ಕ್ಕೂ ಹೆಚ್ಚು ದೇವಸ್ಥಾನಗಳನ್ನು ಜೀರ್ಣೋದ್ಧಾರಗೊಳಿಸಲಾಗಿದೆ. ಕ್ಷೇತ್ರದಲ್ಲಿ ಓಡಾಡುವಾಗ ಯಾವುದೇ ಭಾಗಕ್ಕೆ ಹೋದರೂ ನೂತನ ದೇವಾಲಯಗಳನ್ನು ಕಣ್ತುಂಬಿಕೊಳ್ಳಲು ಸಂತೋಷವೆನಿಸುತ್ತಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಯುವರಾಜ ಕದಂ, ಮೃಣಾಲ್ ಹೆಬ್ಬಾಳಕರ್, ಸುರೇಶ ಡುಕರೆ, ಮಾರುತಿ ಡುಕರೆ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹೇಮಂತ ಪಾಟೀಲ, ಡಾ.ಕೃಷ್ಣ ಪಾಟೀಲ, ಸುಭಾಷ್ ಡುಕರೆ, ರಾಮನಿಂಗ ದಳವಿ, ಮಹಾವೀರ ಕಿಣಗಿ, ವರ್ಷಾ ಡುಕರೆ, ನಿವೃತ್ತಿ ಡುಕರೆ, ಸಂತೋಷ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 