ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಹೆಬ್ಬಾಳಕರ್ ಆಕ್ರೋಶ
Hebbalkar outraged over NEET question paper leak
ಲೋಕದರ್ಶನ ವರದಿ
ಬೆಳಗಾವಿ: ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆಯ ಸೋರಿಕೆಯಾಗಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕೇಂದ್ರ ಸರ್ಕಾರದ ಚೆಲ್ಲಾಟ ಆಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಆರೋಪಿಸಿದ್ದಾರೆ. ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಅವರು, ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಅತ್ಯಂತ ದುರದೃಷ್ಟಕರ ಮತ್ತು ಖಂಡನೀಯ. ಹಗಲಿರುಳು ಶ್ರಮಿಸಿ ಪರೀಕ್ಷೆ ಬರೆದಿದ್ದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಇಂದು ಅತಂತ್ರವಾಗಿದೆ. ಒಂದು ದೇಶದ ಅತ್ಯುನ್ನತ ಪರೀಕ್ಷೆಗಳನ್ನು ಕೂಡ ಪಾರದರ್ಶಕವಾಗಿ ನಡೆಸಲಾಗದ ಕೇಂದ್ರ ಸರ್ಕಾರದ ಆಡಳಿತ ವೈಫಲ್ಯಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕಿಲ್ಲ. ಪರೀಕ್ಷಾ ಅಕ್ರಮಗಳು ಮತ್ತು ಆಡಳಿತಾತ್ಮಕ ಅಸಮರ್ಥತೆಯಿಂದಾಗಿ ಇಂದು ನಮ್ಮ ದೇಶದ ಪ್ರತಿಭಾವಂತ ವಿದ್ಯಾರ್ಥಿಗಳು ಬೀದಿಗೆ ಬೀಳುವಂತಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 