ಪೋಲಿಯೋ ಮುಕ್ತ ಜಿಲ್ಲೆಗೆ ಸಹಕರಿಸಿ : ಡಿ ಹೆಚ್ ಓ ಶಂಕರ್ ನಾಯ್ಕ್ ಕರೆ
Help make the district polio-free: DHO Shankar Naik appeals
ವಿಜಯನಗರ (ಹೊಸಪೇಟೆ) 27: ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನದ ಅಂಗವಾಗಿ ಜಿಲ್ಲಾಡಳಿತ, ರೋಟರಿ ಕ್ಲಬ್, ಭಾರತೀಯ ವೈದ್ಯಕೀಯ ಸಂಘ, ಮಲ್ಲಿಗೆ ಪ್ಯಾರಾ ಮೆಡಿಕಲ್ ಕಾಲೇಜು ಮತ್ತು ತುಂಗಭದ್ರ ಸ್ಕೂಲ್ ಆಫ್ ನರ್ಸಿಂಗ್, ದಿಪಾಲಿ ಸ್ಕೂಲ್ ಆಫ್ ನರ್ಸಿಂಗ್, ಟಿ.ಎಂ.ಇ.ಸೋಸೈಟಿ ಆಫ್ ನರ್ಸಿಂಗ್ ಇವರ ಸಹಯೋಗದಲ್ಲಿ ಶನಿವಾರ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಆಯೋಜಿಸಲಾಗಿದ್ದ ರಾಷಿೊಥಯ ಪಲ್ಸ್ ಪೋಲಿಯೋ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಎಲ್.ಆರ್.ಶಂಕರ್ ನಾಯ್ಕ್ ಚಾಲನೆ ನೀಡಿದರು.
ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜೂನ್ 28ರ ಭಾನುವಾರದಂದು ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸುವಂತೆ ಮನವಿ ಮಾಡಿದರು. ನೆರೆ ಜಿಲ್ಲೆ, ರಾಜ್ಯಗಳಿಂದ ಬಂದಿರುವ ಪ್ರಯಾಣಿಕರು ಹಾಗೂ ಸುತ್ತಮುತ್ತಲಿನ ನಿವಾಸಿಗಳು ತಮ್ಮ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸುವಂತೆ ತಿಳಿಸಿದರು.
ನೂತನ ಕ್ಯೂಆರ್ ಕೋಡ್ ವ್ಯವಸ್ಥೆ: ಸಾರ್ವಜನಿಕರ ಅನುಕೂಲಕ್ಕಾಗಿ ಈ ಬಾರಿ ನೂತನ ತಂತ್ರಜ್ಞಾನವನ್ನು ಪರಿಚಯಿಸಲಾಗಿದ್ದು, ಇಲಾಖೆ ವತಿಯಿಂದ ನೀಡಲಾಗಿರುವ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡುವುದರ ಮೂಲಕ ಸಾರ್ವಜನಿಕರು ತಮ್ಮ ಹತ್ತಿರದ ಪೋಲಿಯೋ ಲಸಿಕಾ ಕೇಂದ್ರವನ್ನು ಸುಲಭವಾಗಿ ಪತ್ತೆ ಹಚ್ಚಬಹುದಾಗಿದೆ. ಇದರಿಂದ ಹತ್ತಿರದ ಪೋಲಿಯೋ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ಪೋಲಿಯೋ ಲಸಿಕೆ ಹಾಕಿಸಿಕೊಳ್ಳಬಹುದು. ದೇಶವನ್ನು ಸಂಪೂರ್ಣ ಪೋಲಿಯೋ ಮುಕ್ತವಾಗಿಸಲು ಸಾರ್ವಜನಿಕರು ಕೈಜೋಡಿಸಬೇಕು ಎಂದರು.
ಜಾಥಾದಲ್ಲಿ ಪಾಲ್ಗೊಂಡ ನರ್ಸಿಂಗ್ ವಿದ್ಯಾರ್ಥಿಗಳು ಲಸಿಕಾ ಅಭಿಯಾನದ ಬಿತ್ತಿಪತ್ರಗಳನ್ನು ಹಿಡಿದು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ, ಘೋಷಣೆ ಕೂಗುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಜಾಗೃತಿ ಜಾಥ ಕಾರ್ಯಕ್ರಮವು ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆ (ಹಳೇ ಆಸ್ಪತ್ರೆ ಆವರಣ) ಆರಂಭವಾಗಿ ನಂತರ ಪುಣ್ಯಮೂರ್ತಿ ಸರ್ಕಲ್, ಬಸ್ ನಿಲ್ದಾಣ, ಪುನೀತ್ ರಾಜ್ ಕುಮಾರ್ ಸರ್ಕಲ್, ಅಂಬೇಡ್ಕರ್ ಸರ್ಕಲ್, ರಾಮಾ ಟಾಕೀಸ್ ಮಾರ್ಗವಾಗಿ ಚಲಿಸಿ ದೊಡ್ಡ ಮಸೀದಿ ಮಾರ್ಗದಿಂದ ಪುನಃ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಮುಕ್ತಾಯಗೊಂಡಿತು.
ಈ ವೇಳೆ ಜಿಲ್ಲಾ ಆರಿ್ಸ.ಹೆಚ್. ಅಧಿಕಾರಿ ಡಾ. ಜಂಬಯ್ಯ, ಆರೋಗ್ಯ ನೀರೀಕ್ಷಣಾಧಿಕಾರಿ ಧರ್ಮನಗೌಡ, ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ.ದೊಡ್ಡಮನಿ, ತಾಲ್ಲೂಕು ವೈದ್ಯಾಧಿಕಾರಿ ಡಾ. ವಿನೋದ್ ಕುಮಾರ್ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ, ವಿವಿಧ ನರ್ಸಿಂಗ್ ಕಾಲೇಜ್ ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 