ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ನ. 18ರ ವರೆಗೆ ಅವಧಿ ವಿಸ್ತರಣೆ

ಗದಗ : ಭಾರತ ಚುನಾವಣೆ ಆಯೋಗವು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಸರಣೆ ಅವಧಿಯನ್ನು  ನವೆಂಬರ 18ರ ವರೆಗೆ ವಿಸ್ತರಿಸಿದ್ದು ಈ ಅವಧಿಯೊಳಗಾಗಿ ಮತದಾರರ ಪಟ್ಟಿ ಪರಿಷ್ಕರಣೆ ಪೂರ್ಣಗೊಳಿಸಲು ರಾಜ್ಯ ಕೌಶಲ್ಯಾಬಿವೃದ್ಧಿ,ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕಾರ್ಯದಶರ್ಿಗಳು ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ವೀಕ್ಷಕರಾದ ಡಾ.ಎಸ್.ಸೆಲ್ವಕುಮಾರ ಸೂಚಿಸಿದರು.

ಗದಗ ಜಿಲ್ಲಾಡಳಿತ ಭವನದಲ್ಲಿಂದು ಜರುಗಿದ ಮತದಾರರ ಪಟ್ಟಿ ಪರಿಷ್ಕರಣೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇ.ವಿ.ಪಿ ತಂತ್ರಾಂಶದಲ್ಲಿ   ಮತದಾರರ ಪರಿಶೀಲನಾ ಕಾರ್ಯಕ್ರಮದಡಿ ಗದಗ ಜಿಲ್ಲೆಯ ಪ್ರಗತಿ ನಿಧಾನವಾಗಿದೆ. ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ವೈಯಕ್ತಿಕ ವಿವರಗಳನ್ನು ಪರಿಶೀಲಿಸಿಕೊಳ್ಳಲು ಹಾಗೂ 01-01-2020ಕ್ಕೆ 18 ವರ್ಷ ಪೂರ್ಣಗೊಳ್ಳುವ ಹೊಸ ಮತದಾರರ ಹೆಸರು ಸೇರ್ಪಡೆಗೆ ಅಗತ್ಯದ ಕ್ರಮ ಜರುಗಿಸಲು ಸೂಚಿಸಿದರು. ಹೊಸ ಯುವ ಮತದಾರರ ಸೇರ್ಪಡೆ ಕುರಿತು ಕಾಲೇಜು ವಿಧ್ಯಾಥರ್ಿಗಳಲ್ಲಿ ಜಾಗೃತಿ ಕಾರ್ಯಕ್ರಮ ತೀವ್ರಗೊಳಿಸಲು ಡಾ. ಸೆಲ್ವಕುಮಾರ ಸೂಚನೆ ನೀಡಿದರು.

ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮಾತನಾಡಿ ಮತದಾರರ ಸಂಕ್ಷಿಪ್ತ ಪರಿಶೀಲನೆಗೆ ಹಾಗೂ ಹೊಸ ಮತದಾರರ ಸೇರ್ಪಡೆಗೆ ಕೈಗೊಂಡ ಕ್ರಮಗಳ ಕುರಿತು ಮಾಹಿತಿ ನೀಡಿದರು. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಅಗತ್ಯದ ಪ್ರಚಾರ ಕಾರ್ಯಕ್ರಮವನ್ನು ಕೈಗೊಂಡು ಪ್ರಗತಿ ಸಾಧಿಸಲಾಗುತ್ತಿದೆ ಎಂದರು.

ಜಿ.ಪಂ. ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಡಾ.ಆನಂದ ಕೆ. ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪವಿಭಾಗಾಧಿಕಾರಿ ಪಿ.ಎಸ್.ಮಂಜುನಾಥ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿದರ್ೇಶಕ ಟಿ.ದಿನೇಶ, ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತ ಮನ್ಸೂರ ಅಲಿ ಸ್ಭೆರಿದಂತೆ ತಹಶೀಲ್ದಾರರು, ಪ.ಪಂ. ಮುಖ್ಯಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.