6ಕೋಟಿ ವೆಚ್ಚದಲ್ಲಿ ಹೈಟೆಕ್ ಹೆಸ್ಕಾಂ ಕಚೇರಿ ಕಟ್ಟಡ ನಿರ್ಮಾಣ
Hi-tech HESCOM office building to be constructed at a cost of Rs 6 crore
6ಕೋಟಿ ವೆಚ್ಚದಲ್ಲಿ ಹೈಟೆಕ್ ಹೆಸ್ಕಾಂ ಕಚೇರಿ ಕಟ್ಟಡ ನಿರ್ಮಾಣ
ಚಿಕ್ಕೋಡಿ 16: ಪಟ್ಟಣದಲ್ಲಿ ಹೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಕಾರ್ಯ ಮತ್ತು ಪಾಲನಾ ವಿಭಾಗ ಹಾಗೂ ಅಧೀಕ್ಷಕ ಇಂಜಿನಿಯರ ಕಾರ್ಯ ಮತ್ತು ಪಾಲನಾ ವೃತ್ತ ಕಚೇರಿ ಕಟ್ಟಡ ನಿರ್ಮಾಣ ಮಾಡಿ ಎರಡು ವರ್ಷ ಸಂದಿವೆ. ಆದರೆ ಈವರೆಗೆ ಕಟ್ಟಡ ಉದ್ಘಾಟನೆ ಭಾಗ್ಯವಿಲ್ಲ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಾಗಿದ್ದು ಹಲವಾರು ವಿಭಾಗೀಯ ಕಚೇರಿಗಳು ಇಲ್ಲಿ ಕಾರ್ಯನಿರ್ವಹಿಸುತ್ತಿವೆ. ಮುಂದೆ ಚಿಕ್ಕೋಡಿ ಜಿಲ್ಲಾ ಕೇಂದ್ರವಾಗಬಹುದು ಎಂಬ ಕಾರಣದಿಂದ ಈಗಾಗಲೇ ಬಹುಪಾಲು ವಿಭಾಗೀಯ ಕಚೇರಿಗಳು, ಜಿಲ್ಲಾ ಕಚೇರಿಗಳು ಇಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಇವುಗಳಲ್ಲಿ ಹೆಸ್ಕಾಂ ಕಚೇರಿ ಕೂಡ ಒಂದು. ಸುಮಾರು 6ಕೋಟಿ ವೆಚ್ಚದಲ್ಲಿ ಹೈಟೆಕ್ ಹೆಸ್ಕಾಂ ಕಚೇರಿ ಕಟ್ಟಡ ನಿರ್ಮಾಣ ಮಾಡಿದರೂ ಅದಕ್ಕಿನ್ನೂ ಉದ್ಘಾಟನೆ ಭಾಗ್ಯ ಕೂಡಿ ಬಂದಿಲ್ಲ. ಉದ್ಘಾಟನೆ ಕಾಣದೆ ಇರುವುದರಿಂದ ಕಚೇರಿಗಳಾವುವೂ ಇಲ್ಲಿ ಸ್ಥಳಾಂತರಗೊಂಡಿಲ್ಲ. ಹೀಗಾಗಿ ಕಟ್ಟಡ ಹಾಳಾಗುವ ಸ್ಥಿತಿಗೆ ಬಂದಿದೆ. ಅಲ್ಲಿನ ವಸ್ತುಗಳೆಲ್ಲ ತುಕ್ಕು ಹಿಡಿಯುತ್ತಿದ್ದುಕೋಟ್ಯಾಂತರ ರೂಪಾಯಿ ನೀರಲ್ಲಿ ಹೋಮ ಮಾಡಿದಂತಾಗಿದೆ. ಇನ್ನು ಪೂರ್ಣಗೊಂಡ ಈ ಕಟ್ಟಡದ ಆವರಣದಲ್ಲಿ ಹಸಿರು ಕಸ ಬೆಳೆಯುತ್ತಿದೆ. ಸರಿಯಾಗಿ ನಿರ್ವಹಣೆ ಇಲ್ಲದೆ ಇರುವುದರಿಂದ ಹೈಟೆಕ್ ಕಟ್ಟಡ ಹಾಳಾಗುವ ಸ್ಥಿತಿಗೆ ಬಂದಿದೆ. ಈ ಕುರಿತು ಕಾರ್ಯನಿರ್ವಾಹಕ ?????????? ಕೇಳಿದರೆ ಬೇಜವಾಬ್ದಾರಿ ಉತ್ತರ ನೀಡಿ ಜಾರಿಕೊಳ್ಳುತ್ತಿದ್ದಾರೆಹೆಸ್ಕಾಂ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ ಮತ್ತು ಅಧೀಕ್ಷಿಕ ಇಂಜಿನಿಯರ ಕಚೇರಿ ಒಂದೆ ಕಡೆ ಇರಬೇಕು ಎಂಬ ಸದುದ್ದೇಶದಿಂದ ಇಲ್ಲಿನ ಜನಪ್ರತಿನಿಧಿಗಳು 6 ಕೋಟಿ ಮಂಜೂರು ಮಾಡಿಸಿಕೊಂಡು ಬಂದಿದ್ದರು. 2022ರಲ್ಲಿ ಕಟ್ಟಡ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಕಾಮಗಾರಿ 2024ರಲ್ಲಿ ಮುಗಿದಿದೆ. ಆದರೆ ಕಟ್ಟಡ ಕಾಮಗಾರಿ ಮುಗಿದು ಒಂದು ವರ್ಷ ಕಳೆದರೂ ಉದ್ಘಾಟನಾ ಭಾಗ್ಯ ಕಂಡಿಲ್ಲ. ಸಚಿವರಿಗೆ ಕಾಯುತ್ತಿರುವ ಕಟ್ಟಡ...ಕಾಮಗಾರಿ ಮುಗಿದು ಒಂದು ವರ್ಷವಾಗಿದೆ. ಆದರೆ ಸಚಿವರಿಂದ ಉದ್ಘಾಟನೆ ಮಾಡಿಸುವುದಾಗಿ ಕಾರ್ಯ ನಿರ್ವಾಹಕ ಇಂಜಿನಿಯರ ತಿಳಿಸಿದ್ದಾರೆ. ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಸಚಿವರಿಂದ ಉದ್ಘಾಟನೆ ಮಾಡಲಾಗುತ್ತದೆ ಎಂದು ಹೇಳುತ್ತಾರೆ ಅಭಿಯಂತರರು, ಒಟ್ಟಿನಲ್ಲಿ 6 ಕೋಟಿ ರೂ.ಗಳಲ್ಲಿ ನಿರ್ಮಿಸಲಾದ ಹೈಟೆಕ್ ಕಟ್ಟಡ ಆದಷ್ಟು ಬೇಗ ಜನತೆ ಸೇವೆಗೆ ಉಪಯೋಗ ವಾಗಲಿ ಎನ್ನುವುದು ಸಾರ್ವಜನಿಕರ ಒತ್ತಾಸೆಯಾಗಿದೆ. ಇನ್ನು ಮುಂದಾದರೂ ಹೆಸ್ಕಾಂ ಅಧಿಕಾರಿಗಳು ಯಾವ ಕ್ರಮಕ್ಕೆ ಮುಂದಾಗುತ್ತಾರೆಯೋ ಎಂಬುದನ್ನು ಕಾಯ್ದು ನೋಡಬೇಕಾಗಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 